ಉಜಿರೆ: ಲಾಯಿಲ ಕ್ಷಯರೋಗ ಆಸ್ಪತ್ರೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಂಚಾರಿ ಆಸ್ಪತ್ರೆ ಹಾಗೂ ಪ್ರಸ್ತುತ ಮಂಗಳೂರಿನ ಎಸ್.ಡಿ.ಎಂ ಕಣ್ಣಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವ್ಯವಸ್ಥಾಪಕರಾಗಿ ಸೇರಿದಂತೆ ಒಟ್ಟು 38 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಶಿವಾನಂದ ಪ್ರಭು ಡಿ. 15ರಂದು ನಿಧನರಾಗಿದ್ದು, ಇವರಿಗೆ ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೆಶಕರಾದ ಎಂ. ಜನಾರ್ದನ್ ಅವರು ಶ್ರದ್ಧಾಂಜಲಿ ಅರ್ಪಿಸಿ ಮಾತನಾಡುತ್ತಾ, ಶಿವಾನಂದ ಪ್ರಭು ಅವರು ಎಲ್ಲರೊಂದಿಗೆ ಬೆರೆಯುವ ಮತ್ತು ಸ್ಪಂಧಿಸುವ ಗುಣ ಹೊಂದಿದ್ದು, ಅತ್ಯುತ್ತಮ ಸೇವೆ ನೀಡುವ ಮೂಲಕ ಸಂಸ್ಥೆ ಹಾಗೂ ಜನರ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಇವರ ನಿಧನದಿಂದ ಸಂಸ್ಥೆಗೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ, ಭಗವಂತ ಮೃತರ ಕುಟುಂಬಕ್ಕೆ ಅಗಲಿಕೆಯ ನೋವು ಸಹಿಸುವ ಶಕ್ತಿ ನೀಡಲಿ ಎಂದರು.
ರವೀಂದ್ರ ಗುಡಿಗಾರ್ ಹಾಗೂ ನರ್ಸಿಂಗ್ ಸಿಬ್ಬಂದಿ ವಿನೋದ ಇವರು ಶಿವಾನಂದ ಪ್ರಭು ಇವರೊಂದಿಗೆ ಸಹೋದ್ಯೋಗಿಗಳಾಗಿ ದುಡಿದ ಅನುಭವವನ್ನು ಹಂಚಿಕೊಂಡರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೆಂದ್ರ ಕುಮಾರ್. ಪಿ, ಇತರ ವೈದ್ಯರು, ದಾದಿಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.