30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

ಕೊಕ್ಕಡ: ಇತಿಹಾಸ ಪ್ರಸಿದ್ಧ ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಪ್ರತಿ ನಡೆಯುವ ಸಂಭ್ರಮದ ಕೋರಿ ಜಾತ್ರೆಯು ಡಿ. 17ರಂದು ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

ಬೆಳ್ಳಿಗೆ ದೇವಸ್ಥಾನದಲ್ಲಿ ಗಣಹೋಮ, ಏಕಾದಶರುದ್ರ ನಡೆದು ಮಧ್ಯಾಹ್ನ ಮಹಾಪೂಜೆ, ನಂತರ ದೇವರ ಗದ್ದೆಗೆ ಜಾನುವಾರುಗಳು ಇಳಿಸಲಾಯಿತು.

ಸಾಯಂಕಾಲ ದೇವರ ಉತ್ಸವ ಹಾಗೂ ಸಂಜೆ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರ ಆಶೀರ್ವಚನದೊಂದಿಗೆ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಸುಲೋಚನಾ ಮತ್ತು ವೆಂಕಟೇಶ ಆರ್ಚಾಯ ನೂಜೆ ಇವರ ಸೇವಾರ್ಥವಾಗಿ ಶ್ರೀ ದೇವಿ ಲಲಿತೋಪಾಖ್ಯಾನ ಕಾಲಮಿತಿಯ ಯಕ್ಷಗಾನ ಬಯಲಾಟ ನಡೆಯಲಿದೆ.

ಈ ಸಂದರ್ಭದಲ್ಲಿ ಪವಿತ್ರಪಾಣಿ ರಾಧಾಕೃಷ್ಣ ಎಡಪಡಿತ್ತಾಯ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲ್ಲಾಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಮತ್ತು ಊರ ಪರವೂರ ಗಣ್ಯರು ಉಪಸ್ಥಿತರಿದ್ದರು.

Related posts

ತಣ್ಣೀರುಪoತ ವಲಯದ ಕರಾಯ ಕಾರ್ಯಕ್ಷೇತ್ರದಲ್ಲಿ ವಿಕ್ರಂ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಉಜಿರೆಯ ಶ್ರೀ ಧ.ಮಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಮಾರೋಪ ಸಮಾರಂಭ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

Suddi Udaya

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

Suddi Udaya

ನರೇಗಾದಲ್ಲಿ ಗುರಿ ಸಾಧಿಸಿದ ಅರಸಿನಮಕ್ಕಿ ಗ್ರಾ.ಪಂ. ಗೆ ಪ್ರಶಂಸಾ ಪತ್ರ ಮತ್ತು ಸ್ಮರಣಿಕೆ ಗೌರವ

Suddi Udaya
error: Content is protected !!