24 C
ಪುತ್ತೂರು, ಬೆಳ್ತಂಗಡಿ
April 3, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

ಬೆಳ್ತಂಗಡಿ : ಕ್ಷುಲ್ಲಕ ವಿಚಾರದಲ್ಲಿ ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿ ಧರ್ಮಗುರುಗಳ ಮೇಲೆ ಸುಮಾರು 12 ಜನರ ತಂಡದಿಂದ ಮಸೀದಿಗೆ ಡಿ.17 ರಂದು ಸಂಜೆ ನುಗ್ಗಿ ಹಲ್ಲೆ ಮಾಡಿದ್ದು.ಗಾಯಗೊಂಡ ಧರ್ಮಗುರುಗಳು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಮುಹಿದ್ದಿನ್ ಜುಮ್ಮಾ ಮಸೀದಿ ಜಾಲಲಿನಗರದ ಧರ್ಮಗುರುಗಳಾದ ಶಮೀರ್ ಮುಸ್ಲಿಯಾರ್ (37) ಎಂಬವರಿಗೆ ಡಿ.17 ರಂದು ಸಂಜೆ 7:30 ರ ಸುಮಾರಿಗೆ ಸ್ಥಳೀಯರಾದ ಬದ್ರುದ್ದಿನ್, ಸಂಶುದ್ದಿನ್, ಅಹಮದ್ ಟಿಬಿ ರೋಡ್, ನೌಫಲ್ ,ಅನ್ಸರ್, ಮುನೀರ್ ಅಸೀಫ್,ಅಫೀಝ್,ಅಫ್ರೀಜ್, ಶರೀಫ್,ಅಬ್ದುಲ್ ಖಾದರ್ ಮತ್ತಿತರರು ಮಸೀದಿಗೆ ನುಗ್ಗಿ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.ಹಲ್ಲೆ ಬಳಿಕ ಮಸೀದಿ ಆವರಣದಲ್ಲಿ ಹಲ್ಲೆದ ಮಾಡಿದ ತಂಡದವರು ಮತ್ತು ಮಸೀದಿಯವರ ಜೊತೆ ಗಲಾಟೆ ನಡೆದಿದ್ದು.ಈ ಘಟನೆಯ ಬಗ್ಗೆ ವಿಡಿಯೋ ವೈರಲ್ ಅಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಧರ್ಮಗುರುಗಳು ದೂರು ನೀಡಲಾಗಿದ್ದು. ಪೊಲೀಸರು ತಬಿಖೆ ನಡೆಸುತ್ತಿದ್ದಾರೆ.

Related posts

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!