ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಶುದ್ದಗಂಗಾ ಅಭಿವೃದ್ಧಿ ವಿಭಾಗದಿಂದ ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮವು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಚೇರಿಯಲ್ಲಿ ಡಿ. 17ರಂದು ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೆಂದ್ರ ಹೆಗ್ಗಡೆಯವರು ಕಾರ್ಯಕ್ರಮ ಉದ್ಘಾಟಿಸಿ,800 ನೇ ಕೆರೆ ಹಸ್ತಾಂತರಿಸಿ ಮಾತನಾಡಿ ಕ್ಷೇತ್ರದ ಅನೇಕ ಕಾರ್ಯಕ್ರಮಗಳಲ್ಲಿ ಕೆರೆ ಅಭಿವೃದ್ಧಿ ಕಾರ್ಯಕ್ರಮ ಅತ್ಯಂತ ಪ್ರಯವಾದುದ್ದು, ಕೃಷಿಗೆ, ಮನುಷ್ಯರಿಗೆ, ಪ್ರಾಣಿ ಪಕ್ಷಿಗಳಿಗೆ ಜಲಬೇಕು.ಇದಕ್ಕಾಗಿ ಜೀವಜಲ ಕೈಗೊಂಡಿದ್ದೇವೆ ಎಂದರು.
ಕ್ಷೇತ್ರದ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಮಾತನಾಡಿ ದ.ಕ.ಜಿಲ್ಲೆಯಲ್ಲಿ ಒಂದು ಕೆರೆ ಅಭಿವೃದ್ಧಿ ಮಾಡಬೇಕೆಂಬ ಕನಸಿತ್ತು,ಇಂದು ರಾಜ್ಯದಲ್ಲಿ 800 ಕೆರೆ ಅಭಿವೃದ್ಧಿಯಾಗಿದೆ. ಒಂದೊಂದು ಕೆರೆಯು ಆ ಊರಿನ ಕಲ್ಪವೃಕ್ಷ. ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದು ಎಂದರು.
ವೇದಿಕೆಯಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್,ಖ್ಯಾತ ಜಲತಜ್ಞ ಶಿವಾನಂದ ಕಳವೆ ಉಪಸ್ಥಿತರಿದ್ದರು.
ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಪ್ರಸ್ತಾವಿಸಿ,ಸ್ವಾಗತಿಸಿದರು. ಶಿವಾನಂದ ಆಚಾರ್ಯ ನಿರೂಪಿಸಿದರು.ಕೆರೆ ಸಮಿತಿ ಸದಸ್ಯರಾದ ಶಿವಕುಮಾರ್ ಶಿವಮೊಗ್ಗ,ಮಲ್ಲಿಕಾರ್ಜುನ ಹುದಲಿ ಅನಿಸಿಕೆ ವ್ಯಕ್ತಪಡಿಸಿದರು.
ರಾಜ್ಯಾದ್ಯಂತ ನಮ್ಮೂರು ನಮ್ಮ ಕೆರೆ ಸಮಿತಿ ಸದಸ್ಯರು ಆಗಮಿಸಿ ತಮ್ಮ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.