24 C
ಪುತ್ತೂರು, ಬೆಳ್ತಂಗಡಿ
April 3, 2025
ರಾಜ್ಯ ಸುದ್ದಿ

ಬಾಂಜಾರು ಮಲೆ ಮಲೆಕುಡಿಯರ ಜಮೀನು ಸಮಸ್ಯೆ : ವಿಧಾನ ಪರಿಷತ್ ನಲ್ಲಿ ಸರಕಾರದ ಗಮನ ಸೆಳೆದ ಬಿ.ಕೆ ಹರಿ ಪ್ರಸಾದ್‌: ಶೇಖರ್ ಲಾಯಿಲ ನೀಡಿದ ಮನವಿಗೆ ಸ್ಪಂದನೆ

ಬೆಳ್ತಂಗಡಿ; ತಾಲೂಕಿನ ಬಾಂಜಾರು ಮಲೆಯಲ್ಲಿ ವಾಸಿಸುತ್ತಿರುವ 47 ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬಗಳಿಗೆ ಭೂ ಮಸೂದೆ ಕಾಯ್ದೆಯ ಅಡಿಯಲ್ಲಿ ಮಂಜೂರಾಗಿರುವ ಜಮೀನಿನ ವಿರುದ್ದ ರಾಜ್ಯ ಸರಕಾರ ದಾಖಲಿಸಿರುವ ರಿಟ್ ಅರ್ಜಿಯನ್ನು ಹಿಂಪಡೆಯುವಂತೆ ಹಿರಿಯ ಕಾಂಗ್ರೆಸ್ ಮುಖಂಡ ವಿಧಾನ ಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್ ವಿಧಾನ ಪರಿಷತ್ ನಲ್ಲಿ ಒತ್ತಾಯಿಸಿದ್ದಾರೆ.

ಬೆಳ್ತಂಗಡಿ ತಾಲ್ಲೂಕಿನ ಬಾಂಜಾರು ಮಲೆಕುಡಿಯ ಕಾಲೋನಿಯಲ್ಲಿ 47 ಕುಟುಂಬಗಳು ವಾಸಿಸುತ್ತಿದ್ದಾರೆ. ಯೆನೆಪೋಯ ಮೊಹಿದ್ದೀನ್ ಕುಂಞಿ ಅಂಡ್ ಕಂಪನಿ ಇವರಿಗೆ ಬೆಳ್ತಂಗಡಿ ತಾಲ್ಲೂಕಿನ ನೆರಿಯ ಗ್ರಾಮದಲ್ಲಿ ಒಟ್ಟು 4,028 ಎಕರೆ ಜಮೀನನ್ನು ಹೊಂದಿದ್ದು ಇದರಲ್ಲಿ 368 ಎಕರೆ ಜಮೀನು ಹೆಚ್ಚುವರಿ ಜಮೀನು ಹೊಂದಿರುವುದಾಗಿ ಬೆಳ್ತಂಗಡಿ ಭೂನ್ಯಾಯ ಮಂಡಳಿ ತೀರ್ಪು ನೀಡಿರುತ್ತದೆ. ತೀರ್ಪಿನ ವಿರುದ್ಧ ಭೂಮಾಲೀಕರ ಸಂಸ್ಥೆ ಹಾಗೂ ರಾಜ್ಯ ಸರ್ಕಾರ ಸಲ್ಲಿಸಿದ ರಿಟ್ ಅರ್ಜಿಗಳನ್ನು ರಾಜ್ಯ ಹೈಕೋರ್ಟ್ ತಿರಸ್ಕರಿಸಿರುವುದು ತಿಳಿದುಬಂದಿರುತ್ತದೆ. ತದನಂತರದಲ್ಲಿ ಸರ್ಕಾರ ರಿಟ್ ಪಿಟಿಷನ್ ಆದೇಶದ ವಿರುದ್ಧ ರಿವ್ಯೂ ಪಿಟಿಷನ್ ಸಲ್ಲಿಸಿ ಹೈಕೋರ್ಟ್‌ನಲ್ಲಿ ತಿರಸ್ಕೃತವಾದ ಕಾರಣ ಸುರ್ಪೀಂಕೋರ್ಟ್‌ನಲ್ಲಿ ಸ್ಪೇಷಲ್ ಲೀವ್ ಪಿಟಿಷನ್ ದಾಖಲಿಸಿರುತ್ತದೆ.
ಕಂಪನಿ ಕರ್ನಾಟಕ ಭೂ ಸುಧಾರಣಾ ಕಾಯ್ದೆಯಂತೆ ಹೆಚ್ಚುವರಿ ಜಮೀನನ್ನು ಸರ್ಕಾರದ ವಶಕ್ಕೆ ಒಪ್ಪಿಸಬೇಕಾಗಿರುವುದರಿಂದ ಗೇಣಿದಾರರಲ್ಲದ ತಮ್ಮದೇ ವಲಯದ 53 ಜನರಿಗೆ 537 ಎಕರೆ ಜಮೀನನ್ನು ಮಂಜೂರು ಮಾಡಿಸಿಕೊಳ್ಳಲಾಗಿರುತ್ತದೆ ಎನ್ನುವುದು ಸರ್ಕಾರದ ವಾದವಾಗಿದ್ದು ಭೂ ನ್ಯಾಯ ಮಂಡಳಿಯಿಂದ ಮಂಜೂರಾಗಿರುವ ಜಮೀನನ್ನು ರದ್ದುಗೊಳಿಸಲು ಪ್ರಯತ್ನ ನಡೆಸಿರುತ್ತದೆ. ಆದರೆ ಮಲೆಕುಡಿಯ ಜನಾಂಗ ವಾಸಿಸುವ ಬಂಜಾರು ಮಲೆಕುಡಿಯು ಸಮುದಾಯ ಕಾಲೋನಿಯ 37 ಕುಟುಂಬಗಳಿಗೆ ಮಂಜೂರಾಗಿರುವ ಜಮೀನಿನ ವಿರುದ್ಧ ರಾಜ್ಯ ಸರ್ಕಾರ ದಾಖಲಿಸಿರುವ ರಿಟ್ ಅರ್ಜಿಯನ್ನು ಹಿಂಪಡೆದು ಈ ಸಮುದಾಯದ ಜನರ ಶ್ರೇಯೋಭಿವೃದ್ಧಿಗೆ ಸಹಕರಿಸಬೇಕೆಂದು ಶೂನ್ಯವೇಳೆಯಲ್ಲಿ ಹರಿಪ್ರಸಾದ್ ಒತ್ತಾಯಿಸಿದ್ದಾರೆ. ಹರಿಪ್ರಸಾದ್ ಅವರಿಗೆ ಇತ್ತೀಚೆಗಷ್ಟೇ ಶೇಖರ್ ಲಾಯಿಲ ಮನವಿ ಸಲ್ಲಿಸಿದ್ದರು.

Related posts

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲನೆ ನಡೆಸಿದ ಹೈಕೋರ್ಟ್: ಸರಕಾರ, ಮೂಲದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದ ನ್ಯಾಯಪೀಠ

Suddi Udaya

ಬೆಳ್ತಂಗಡಿಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಚಾಲನೆ

Suddi Udaya

ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಅಂತರಿಕ ಕಚ್ಚಾಟ ಬಹಿರಂಗ: ಬೂತುಗಳಲ್ಲಿ ಹಣ ಸಮರ್ಪಕವಾಗಿ ನಿರ್ವಹಣೆಯಾಗಿಲ್ಲ ಎಂದು ಹೇಳಿದ ಕಾರ್ಯಕರ್ತನನ್ನು ತಡೆದ ಬಂಗೇರ: ಬಂಗೇರ ಮಾತನ್ನು ವಿರೋಧಿಸಿ, ಸಭೆಯಿಂದ ಹೊರ ನಡೆದ ಪತ್ರಕರ್ತರು

Suddi Udaya

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಂಬಳ: ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯರ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ, ಒಂದು ಲಕ್ಷ ನಗದು, 16 ಗ್ರಾಂ ಚಿನ್ನ ಮತ್ತು ಟ್ರೋಫಿ

Suddi Udaya
error: Content is protected !!