ಬೆಳ್ತಂಗಡಿ : ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಮತ್ತು ಜೂನಿಯರ್ ರೆಡ್ ಕ್ರಾಸ್ ಘಟಕ, ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇವುಗಳ ಜಂಟಿ ಆಶ್ರಯದಲ್ಲಿ ವೈದ್ಯಕೀಯ ತಪಾಸಣಾ ಶಿಬಿರವನ್ನು ಡಿ.14. ರಂದು ನಡೆಸಲಾಯಿತು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಹಿರಿಯ ಉಪನ್ಯಾಸಕಿ ಶ್ರೀಮತಿ ಸುವರ್ಣ ಕುಮಾರಿ ಕೆ.ಆರ್. ವಹಿಸಿ ಕಾರ್ಯಕ್ರಮವನ್ನು ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಇದರ ಚೇರ್ ಮ್ಯಾನ್ ಹರಿದಾಸ್ ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಶಿಬಿರದ ಮಹತ್ವವನ್ನು ತಿಳಿಸಿದರು.
ಡಾ. ಮನೀಷ ರವರು ವಿದ್ಯಾರ್ಥಿಗಳಿಗೆ ಆರೋಗ್ಯದ ಕಾಳಜಿ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಇದರ ಕಾರ್ಯದರ್ಶಿ ಯಶವಂತ ಪಟವರ್ಧನ್, ಡಾ. ಶಿವಾನಂದ ಸ್ವಾಮಿ, ನಿರ್ದೇಶಕರು ಸಿಯೋನ್ ಆಶ್ರಮ ಕಕ್ಕಿಂಜೆ ಉಪಸ್ಥಿತರಿದ್ದರು.
ಸಭೆಯಲ್ಲಿ ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಇಲ್ಲಿನ ಸದಸ್ಯರುಗಳಾದ ಶ್ರೀಮತಿ ಸುಕನ್ಯ, ಶಿವಕುಮಾರ್ ಹಾಗೂ ಪ್ರಮೋದ್ ಆರ್ ನಾಯಕ್ ಭಾಗವಹಿಸಿದ್ದರು. ಜೂನಿಯರ್ ರೆಡ್ ಕ್ರಾಸ್ ಘಟಕದ ಎಲ್ಲಾ ಸದಸ್ಯರು ಹಾಗೂ ವೈದ್ಯಕೀಯ ತಪಾಸಣೆ ಅಗತ್ಯವುಳ್ಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸರಕಾರಿ ಪದವಿ ಪೂರ್ವ ಕಾಲೇಜಿನ 150, ಪ್ರೌಢಶಾಲೆಯ 50 ಹಾಗೂ ವಿದ್ಯಾರ್ಥಿ ಪೋಷಕರು 04 ಒಟ್ಟು 204 ಮಂದಿ ಶಿಬಿರದ ಪ್ರಯೋಜನವನ್ನು ಪಡೆದರು. ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಇವರು ಶಿಬಿರಾರ್ಥಿಗಳಿಗೆ ಉಚಿತ ಔಷಧಿಗಳನ್ನು ಒದಗಿಸಿದರು.