32.1 C
ಪುತ್ತೂರು, ಬೆಳ್ತಂಗಡಿ
December 18, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆದ್ರಬೆಟ್ಟು ಮರಿಯಾoಬಿಕ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಸ್ಪಾರ್ಕ್ -2024

ಬೆದ್ರಬೆಟ್ಟು : ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಸ್ಪಾರ್ಕ್ 2024-25
ಡಿ.17 ರಂದು ನಡೆಯಿತು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡಿದರು. ವೇದಿಕೆಯಲ್ಲಿರುವ ಗಣ್ಯರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಸುಮಂತ್ ಕುಮಾರ್ ಜೈನ್. ಬಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಕ್ರೀಡಾ ಸಾಧನೆಗೆ ಮೆಚ್ಚುಗೆ ವ್ಯಕ್ತ ಪಡಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಶಿಬಿ ಧರ್ಮಸ್ಥಳ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ವಂದನೀಯ ಫಾದರ್ ಸೆಬಾಸ್ಟಿಯನ್ ವಹಿಸಿದರು.

ವೇದಿಕೆಯಲ್ಲಿ ಚರ್ಚ್ ಕಮಿಟಿ ಸದಸ್ಯರಾದ ಸಜಿ ಒ. ಎಸ್, ಶಾಲಾ ಆಡಳಿತ ಮಂಡಳಿಯ ಸದಸ್ಯ ಫ್ರಾನ್ಸಿಸ್ ವಾಳುಕಾರಣ್, ಶಾಲಾ ಮುಖ್ಯಶಿಕ್ಷಕಿ ವಂದನೀಯ ಸಿಸ್ಟರ್ ಶೆರಿನ್ ಉಪಸ್ಥಿತರಿದ್ದರು.

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಾಲಾ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನು ಬೆಳಗಿದರು. ಶಾಲಾ ಶಿಸ್ತಿನ ಬ್ಯಾಂಡ್ ಸೆಟ್ ನ ಜೊತೆಗೆ ವಿದ್ಯಾರ್ಥಿಗಳ 5 ತಂಡಗಳ ಪಥ ಸಂಚಲನ ನಡೆಯಿತು.

ಶಾಲಾ ವಿದ್ಯಾರ್ಥಿ ನಾಯಕ ಯಶಸ್ 10ನೇ ತರಗತಿ ಇವರು ಕ್ರೀಡಾ ಪ್ರತಿಜ್ಞೆ ಯನ್ನು ಬೋಧಿಸಿ,ಉಳಿದ ವಿದ್ಯಾರ್ಥಿಗಳು ಅದನ್ನು ಮರು ಉಚ್ಚರಿಸಿದರು. ಇದೇ ಸಂಧರ್ಭದಲ್ಲಿ ಶಾಲಾ ವಿದ್ಯಾರ್ಥಿಗಳ ಡ್ಯಾನ್ಸ್ ಮತ್ತು ಕರಾಟೆ ಪ್ರದರ್ಶನ ನಡೆಯಿತು. ಶೈಕ್ಷಣಿಕ ವರ್ಷದಲ್ಲಿ ಹಮ್ಮಿಕೊಳ್ಳಲಾದ ಸಹಪಠ್ಯ ಚಟುವಟಿಕೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ, ಪೋಷಕರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಸಹಶಿಕ್ಷಕ ಕೃಷ್ಣಪ್ಪ ನಿರ್ವಹಿಸಿ, ವಿದ್ಯಾರ್ಥಿ ಕುಮಾರಿ ಕ್ಯಾಥರಿನ್ ಸ್ವಾಗತಿಸಿ, ಸಹ ಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ವಂದಿಸಿದರು.

Related posts

ಕಳೆಂಜ: ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ

Suddi Udaya

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

Suddi Udaya

ಧರ್ಮಸ್ಥಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ

Suddi Udaya

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

Suddi Udaya

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!