22.5 C
ಪುತ್ತೂರು, ಬೆಳ್ತಂಗಡಿ
December 18, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಶಿಕ್ಷಕಿ ಭಾರತಿ ನಿಧನ

ಬೆಳ್ತಂಗಡಿ : ಸಂತೆಕಟ್ಟೆ ಅಯ್ಯಪ್ಪ ಮಂದಿರದ ಬಳಿ 2010ರ ಜುಲೈ 30ರಂದು ನಡೆದ ಭೀಕರ ಅಪಘಾತದಲ್ಲಿ ತೀವ್ರಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಕಳಿಯ ಗ್ರಾಮದ ಕು.ಭಾರತಿ ಅವರು ಡಿ.17 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ.


ಮೇಲಂತಬೆಟ್ಟು ಪದವಿಪೂರ್ವ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಇವರು ಅಪಘಾತದ ಬಳಿಕ ಸೊಂಟದ ಸ್ವಾಧೀನ ಕಳೆದುಕೊಂಡು ಮಲಗಿದ್ದಲ್ಲೇ 14 ವರ್ಷ ನರಕಯಾತನೆ ಅನುಭವಿಸಿದರು. ಕಳೆದ ಕೆಲವು ದಿನಗಳಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಮೃತಪಟ್ಟಿದ್ದಾರೆ.

ಘಟನೆಯ ವಿವರ: 2010ರ ಜುಲೈ 30ರಂದು ಭಾರೀ ಮಳೆ ಸುರಿಯುತ್ತಿದ್ದ ವೇಳೆ ಮೇಲಂತಬೆಟ್ಟು ಪದವಿಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕಿಯರಾದ ಶಿಕ್ಷಕಿ ಕು.ಭಾರತಿ ಹಾಗೂ ಕು.ಜಯಮಾಲಾ ಕಾಲೇಜ್ ಬಿಟ್ಟು ಆಟೋದಲ್ಲಿ ಬರುತ್ತಿದ್ದ ಸಂದರ್ಭ ಮೂಡಿಗೆರೆ ಕಡೆಯಿಂದ ಬರುತ್ತಿದ್ದ ಪಿಕಪ್ ಸಂತೆಕಟ್ಟೆ ಅಯ್ಯಪ್ಪ ಮಂದಿರದ ಬಳಿ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿತ್ತು. ಈ ವೇಳೆ ಶಿಕ್ಷಕಿ ಕು.ಜಯಮಾಲಾ ಸ್ಥಳದಲ್ಲೇ ಮೃತಪಟ್ಟಿದ್ದು ಕು.ಭಾರತಿ ಗಂಭೀರವಾಗಿ ಗಾಯಗೊಂಡಿದ್ದರು.
ಕು.ಜಯಮಾಲಾ ಅವರು ಕೆ.ಎ.ಎಸ್. ಪರೀಕ್ಷೆ ಬರೆದಿದ್ದು ಮರಣೋತ್ತರವಾಗಿ ಬಂದ ಫಲಿತಾಂಶದಲ್ಲಿ ಜಯಮಾಲಾ ಕೆ.ಎ.ಎಸ್. ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೆಲ ಸಮಯ ಆಸ್ಪತ್ರೆಯಲ್ಲೆ ಚಿಕಿತ್ಸೆ ಪಡೆದು ಬಳಿಕ ಮನೆಗೆ ಬಂದಿದ್ದ ಶಿಕ್ಷಕಿ ಭಾರತಿ ಅವರು ಸೊಂಟದ ಸ್ವಾಧೀನ ಕಳೆದುಕೊಂಡ ಪರಿಣಾಮ ಮಲಗಿದ್ದಲ್ಲೆ ಇದ್ದರು. 14 ವರ್ಷ ದೈಹಿಕವಾಗಿ ಹಾಗೂ ಮಾನಸಿಕವಾಗಿ ಬಂದ ಎಲ್ಲಾ ನೋವು, ಸವಾಲುಗಳನ್ನು ಎದುರಿಸಿದ್ದರು. ಕಾಲೇಜ್ ವಿದ್ಯಾರ್ಥಿಗಳ ಜೊತೆ ಸಂಪರ್ಕದಲ್ಲಿದ್ದು ಅವರಿಗೆ ಅಕೌಂಟೆನ್ಸಿ, ಬ್ಯುಸಿನೆಸ್ ಸ್ಟಡೀ ಹೀಗೇ ಏನೇ ವಿಷಯಗಳಿದ್ದರು ಮೊಬೈಲ್ ಮೂಲಕವೇ ಪಾಠ ಹೇಳಿಕೊಡುತ್ತಿದ್ದರು. ಎಂತದ್ದೇ ಪರಿಸ್ಥಿಯಲ್ಲಿದ್ದರು ತಾನು ಶಿಕ್ಷಕಿ ಅನ್ನೋದನ್ನ ಮರೆತವರಲ್ಲ. ಅವರ ಪಾಠ ಕೇಳುತ್ತಿದ್ದ ಮಕ್ಕಳಿಗೂ ಭಾರತಿ ಟೀಚರ್ ತುಂಬಾ ಇಷ್ಟ. ಆದರೆ ಇತ್ತೀಚೆಗೆ ಆರೋಗ್ಯದಲ್ಲಾದ ಏರುಪೇರಿನಿಂದ ಡಿ.17ರಂದು ಕೊನೆಯುಸಿರೆಳೆದಿದ್ದಾರೆ.


ಮೃತರು ತಾಯಿ ಹಾಗೂ ಇಬ್ಬರು ಸಹೋದರ, ನಾಲ್ವರು ಸಹೋದರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆರೋಗ್ಯ ತಪಾಸಣಾ ಶಿಬಿರ”

Suddi Udaya

ಉಜಿರೆ ಶ್ರೀ ಧ. ಮಂ. ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರದ ಸಮಾರೋಪ

Suddi Udaya

ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

Suddi Udaya

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಲೋಕಸಭಾ ಚುನಾವಣೆ, ಶಾಸಕ ಹರೀಶ್ ಪೂಂಜರವರು ತಾಲೂಕಿನ ಹಲವಾರು ಮತಗಟ್ಟೆಗಳಿಗೆ ಭೇಟಿ

Suddi Udaya

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya
error: Content is protected !!