ಕನ್ಯಾಡಿ: ಧರ್ಮಸ್ಥಳ ಸಮೀಪದ ಕನ್ಯಾಡಿಯಲ್ಲಿ ಬೈಕಿಗೆ ಬಸ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಡಿ.18 ರಂದು ತಡ ರಾತ್ರಿ ನಡೆದಿದೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾಡಿ ಸಮೀಪ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ ಧರ್ಮಸ್ಥಳದಿಂದ ಉಜಿರೆ ಕಡೆ ಬರುತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ.
ಈ ವೇಳೆ ಬೈಕ್ ಸವಾರ ಉಜಿರೆ ನಿವಾಸಿ ಸುರೇಂದ್ರ ಗೌಡ ಗಂಭೀರ ಗಾಯಗೊಂಡಿದ್ದು, ತಕ್ಷಣ ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.