20.6 C
ಪುತ್ತೂರು, ಬೆಳ್ತಂಗಡಿ
December 21, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

ಬೆಳ್ತಂಗಡಿ : ದಿನಂಪ್ರತಿ ಮಂಗಳೂರು ಉದ್ಯೋಗಕ್ಕೆ ಹೋಗುವ ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್‌ ಸೌಕರ್ಯವಿಲ್ಲದ ಕಾರಣ ಅನಾನುಕೂಲವಾಗಿದ್ದು, ಇದನ್ನು ನಿವಾರಿಸಲು ಧರ್ಮಸ್ಥಳದಿಂದ ಬಿ.ಸಿ ರೋಡ್ ಮಂಗಳೂರು ಮಾತ್ರ ನಿಲುಗಡೆ ಇರುವ ವೇಗದೂತ ಬಸ್ಸುಗಳನ್ನು ಪ್ರಾರಂಭಿಸಿ ಸುಮಾರು ವರ್ಷಗಳಿಂದ ಇರುವ ಪ್ರಯಾಣಿಕರ ಸಮಸ್ಯೆಗಳಿಗೆ ಸ್ಪಂದಿಸಿ ತಕ್ಷಣ ಬಸ್‌ ಸೌಲಭ್ಯ ಕಲ್ಪಿಸಿ ನೆರವಾಗಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ಸಮಿತಿ ನಿಯೋಗ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಡಿ.18 ರಂದು ಭೇಟಿಯಾಗಿ ಮನವಿ ಸಲ್ಲಿಸಿದರು.

ಮಂಗಳೂರು ವಿಭಾಗ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಭೇಟಿಯಾದ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಅವರ ನಿಯೋಗ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗ ಸಮಸ್ಯೆ ಬಗೆ ಹರಿಸುವಂತೆ ಮನವಿ ಮಾಡಿತು. ನಂತರ ಪುತ್ತೂರು ವಿಭಾಗ ಕೆಎಸ್‌ಆರ್‌ಟಿಸಿ ಅಧಿಕಾರಿಗಳನ್ನು ಹಾಗೂ ಧರ್ಮಸ್ಥಳ ವಿಭಾಗ ಕೆಎಸ್‌ಆರ್‌ಟಿಸಿ ಅಧಿಕಾರಿಗಳನ್ನು ಭೇಟಿಯಾಗಿ ಬಸ್ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಮನದಟ್ಟು ಮಾಡಿ ಮನವಿ ಮಾಡಿಕೊಂಡರು.



ನಿಯೋಗದಲ್ಲಿ ಎಸ್‌ಡಿಪಿಐ ಜಿಲ್ಲಾ ನಾಯಕರಾದ ನವಾಝ್ ಕಟ್ಟೆ, ಹನೀಫ್ ಪುಂಜಾಲಕಟ್ಟೆ, ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಉಜಿರೆ ಬ್ಲಾಕ್ ಅಧ್ಯಕ್ಷ ಮಹಮ್ಮದ್ ಆಲಿ, ಚಾರ್ಮಾಡಿ ಪಂಚಾಯತ್ ಸದಸ್ಯರಾದ ಸಿದ್ಧಿಕ್ ಯು.ಪಿ, ಕ್ಷೇತ್ರ ನಾಯಕರಾದ ಅಶ್ರಫ್ ಚಾರ್ಮಾಡಿ, ಸಹಲ್ ನಿರ್ಸಾಲ್, ಮರ್ಷದ್ ಉಜಿರೆ ಉಪಸ್ಥಿತರಿದ್ದರು. ಮಂಗಳೂರು ಧರ್ಮಸ್ಥಳ ಮಾರ್ಗದಲ್ಲಿ ಹೆಚ್ಚುವರಿ ವೇಗದೂತ ಬಸ್ ಹಾಗೂ ರಾಜಹಂಸ ಬಸ್ ಹಾಕಿ ಆದಷ್ಟು ಬೇಗ ಪ್ರಯಾಣಿಕರ ಬಸ್ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ಈ ಸಂದರ್ಭದಲ್ಲಿ ನೀಡಿದರು.

Related posts

ಬೆಳ್ತಂಗಡಿ: ಪವರ್ ಆನ್‌ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10ರಿಂದ 50 ರಷ್ಟು ರಿಯಾಯಿತಿ

Suddi Udaya

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಎನ್ .ಎಸ್. ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ನಿನ್ನಿಕಲ್ಲು ರಸ್ತೆ ಬಳಿ ಬೈಕ್ ಮತ್ತು ಪಿಕಪ್ ಅಪಘಾತ: ಬೈಕ್ ಸವಾರ ಗಂಭೀರ

Suddi Udaya
error: Content is protected !!