March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

ಬೆಳಾಲು : ದ ಕ ಜಿ ಪಂ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ ಬೆಳಾಲು ಇಲ್ಲಿ ಪ್ರತಿಭಾ ದಿನಾಚರಣೆಯನ್ನು ಡಿ.14ರಂದು ಆಚರಿಸಲಾಯಿತು.

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ ಇಲ್ಲಿನ ಧರ್ಮದರ್ಶಿ ಹರೀಶ್ ಗೌಡ ಇವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಸಂಚಾಲಕ ಮೋಹನ್ ಕುಮಾರ್ ಲಕ್ಷ್ಮಿ ಗ್ರೂಪ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಇನ್ವರ್ಟರ್ ದಾನಿಗಳಾದ ಜಯಣ್ಣ ಗೌಡ ಮಿನಂದೇಲು, ಪ್ರಿಂಟರ್ ದಾನಿಗಳಾದ ನೀಲಯ್ಯ ಗೌಡ ಭೀಮಂಡೆ, ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಗೌಡ ಏಳ್ಳುಗದ್ದೆ, ಬೆಳ್ತಂಗಡಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಟಿ ಬಿ ಬಸವಲಿಂಗಪ್ಪ, ಊರ ಹಿರಿಯರಾದ ಬಾಬು ಗೌಡ ಅಲಕೆದಡ್ಡ, ಡೊಂಬಯ್ಯ ಗೌಡ ಕಾವಟೆ, ಬಾಲಚಂದ್ರ ಹೊಳ್ಳ, ಲೋಕಯ್ಯ ಗೌಡ ಗುಂಡಿಹಿತ್ಲು, ಚಿತ್ತಾರ ಯುವ ಶಕ್ತಿ ಗೆಳೆಯರ ಬಳಗದ ಅಧ್ಯಕ್ಷ ಸುರೇಶ್ ಇರಂಬಿತ್ತಿಲು, ವಿವೇಕ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿಪ್ರಸಾದ್ ಅರಣೆಮಾರು, ಪ್ರತಿಭಾ ದಿನಾಚರಣೆ ಸಮಿತಿಯ ಅಧ್ಯಕ್ಷ ಸಂತೋಷ ಮಡಿವಾಳ, ಎಸ್.ಡಿ.ಎಮ್.ಸಿ ಅಧ್ಯಕ್ಷ ಪ್ರಸಾದ್ ಗೌಡ ಭಾಗವಹಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಾ ಸ್ವಾಗತಿಸಿ, ಜ್ಞಾನ ದೀಪ ಶಿಕ್ಷಕಿ ಕು I ದಿವ್ಯಶ್ರೀ ವರದಿ ವಾಚಿಸಿ, ಸಹಶಿಕ್ಷಕಿ ಶ್ರೀಮತಿ ಜಯಶ್ರೀ ಬಿ ಕೆ ವಂದಿಸಿದರು. ಅತಿಥಿಗಳನ್ನು ದಾನಿಗಳನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು. ಕಲಿಕೆ, ಆಟೋಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಹಶಿಕ್ಷಕಿ ಜಯಶ್ರೀ ಹಾಗೂ ಜ್ಞಾನ ದೀಪ ಶಿಕ್ಷಕಿ ದಿವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸ್ಥಳೀಯ ಅಂಗನವಾಡಿ ವಿದ್ಯಾರ್ಥಿಗಳಿಂದ, ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ಮತ್ತು ಪೌರಾಣಿಕ ನಾಟಕ ಭಕ್ತ ಪ್ರಹ್ಲಾದ ಪ್ರದರ್ಶನಗೊಂಡಿತು.

Related posts

ಮಚ್ಚಿನ ಅಂಚೆ ಕಚೇರಿ ಹಾಗೂ ಮಚ್ಚಿನ ಗ್ರಾ.ಪಂ. ಸಹಯೋಗದಲ್ಲಿ ಆಧಾರ್ ಸೀಡಿಂಗ್ ಕ್ಯಾಂಪ್

Suddi Udaya

ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ: ರಥೋತ್ಸವ, ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸ್ಪೂರ್ತಿ 2K25 ಕಾಮರ್ಸ್ ಫೆಸ್ಟ್

Suddi Udaya

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕುವೆಟ್ಟು: ಮಹಮ್ಮಾಯಿ ದೇವಿಯ ಮಾರಿ ಪೂಜೆ ಹಾಗೂ ಗುಳಿಗ ದೈವದ ನೇಮೋತ್ಸವ

Suddi Udaya

ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಕೊಠಡಿಗೆ ಶಿಲಾನ್ಯಾಸ

Suddi Udaya
error: Content is protected !!