April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹ ಕೂಟವು ಡಿ. 20 ರಂದು ಸಾಂತೋಮ್ ಟವರ್ ನಲ್ಲಿ ನಡೆಯಿತು.


ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ. ರವರು ಪ್ರಾಸ್ತಾವಿಕ ಮಾತನಾಡಿ ಮಾಧ್ಯಮ ಮಿತ್ರರು ಸಂಸ್ಥೆಯ ಕಾರ್ಯಕ್ರಮಕ್ಕೆ ನೀಡುವ ಸಹಕಾರಕ್ಕೆ ಸ್ಮರಿಸಿದರು.

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಮುಖ್ಯ ಅಭ್ಯಾಗತರಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಇನ್ನೊರ್ವ ಮುಖ್ಯ ಅತಿಥಿ ಮೀಡಿಯಾ ಕ್ಲಬ್ ಅಧ್ಯಕ್ಷ ಬಾಲಕೃಷ್ಣರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಮೀಡಿಯಾ ಅಪೋಸ್ತಲೇಟ್ ನಿರ್ದೇಶಕರಾದ ವಂದನೀಯ ಫಾ. ಮ್ಯಾಥ್ಯೂ ತಾಯೇಕ್ಕಾಟ್ಟೀಲ್ ಕ್ರಿಸ್ಮಸ್ ಕೇಕ್ ಕತ್ತರಿಸಿ, ಕ್ರಿಸ್ಮಸ್ ಹಬ್ಬದ ಸಂದೇಶ ನೀಡಿದರು.
ಹಾಜರಿದ್ದ ಪತ್ರಿಕೆ ಹಾಗೂ ಮೀಡಿಯಾ ಕ್ಲಬ್ಬಿನ ಸದಸ್ಯರಿಗೆ ಕಿರು ಕಾಣಿಕೆ ನೀಡಲಾಯಿತು. ಸಂಯೋಜಕಿ ಕು. ಶ್ರೇಯಾ ಪ್ರಾರ್ಥನೆ ಹಾಡಿದರು.
ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ’ಸೋಜರವರು ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸಂಯೋಜಕರಾದ ಸುನಿಲ್ ಗೊನ್ಸಾಲ್ವಿಸ್ ಸ್ವಾಗತಿಸಿ, ಶ್ರೀಮತಿ ಜಿನಿ ಪಿ.ಜೆ. ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

Suddi Udaya

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರವರಿಂದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya
error: Content is protected !!