ಮಂಗಳೂರು : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಹಮ್ಮದ್ ಶರೀಫ್ ವಿದೇಶದಿಂದ ವಾಪಸ್ ಬರುತ್ತಿದ್ದಾಗ ದೆಹಲಿ ವಿಮಾನದಲ್ಲಿ ಎನ್.ಐ.ಎ ಅಧಿಕಾರಿಗಳು ಬಂಧಿಸಿದ್ದಾರೆ. ಈತನ ಪತ್ತೆಗಾಗಿ ಎನ್.ಐ.ಎ ಅಧಿಕಾರಿಗಳು 5 ಲಕ್ಷ ರಿವಾರ್ಡ್ ಘೋಷಿಸಿದ್ದರು. ಶರೀಫ್ ನಿಷೇಧಿತ ಪಿಎಫ್‌ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್.ಐ.ಎ ಅಧಿಕಾರಿಗಳು ಶರೀಫ್ ಮನೆಗೆ ದಾಳಿ ಮಾಡಿದ್ದರು.