ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜೆಸಿ ಸಪ್ತಾಹ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಕಳೆದ 4, ವರ್ಷಗಳ ಹಿಂದೆ ಶಿಕ್ಷಣ ಸಂಸ್ಥೆಯನ್ನು ಹುಟ್ಟುಹಾಕಿ ಇಂದು ಸುಮಾರು ಮೂರುವರೆ ಸಾವಿರ ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ. ಗುಣ ಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾದ ಎಕ್ಸೆಲ್ ಸತತವಾಗಿ ಅದ್ಬುತ ಫಲಿತಾಂಶಗಳನ್ನು ಸಾಧಿಸುತ್ತಿದೆ.
ಈ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್ ಡಿ,ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಜೆಸಿಐ ವಲಯಾಧ್ಯಕ್ಷ ಗೀರೀಶ್ ಎಸ್.ಪಿ, ಉದ್ಯಮಿ ಪ್ರವೀಣ್ ಫರ್ನಾಂಡೀಸ್ ಹಳ್ಳಿಮನೆ,ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಜೆಎಸಿ ನಿರ್ದೇಶಕ ಕಿರಣ್ ಕುಮಾರ್ ಶೆಟ್ಟಿ, ವಲಯ ಉಪಾಧ್ಯಕ್ಷ ಶಂಕರ್ ರಾವ್, ಪೂರ್ವಾಧ್ಯಕ್ಷರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ, ಚಿದಾನಂದ ಇಡ್ಯ, ವಸಂತ ಶೆಟ್ಟಿ ಶ್ರದ್ದಾ,ರವೀಂದ್ರ ಶೆಟ್ಟಿ ಸುರಭಿ, ಸಭಾಶ್ಚಂದ್ರ ಎಂಪಿ,ಅಶೋಕ್ ಕುಮಾರ್ ಬಿಪಿ, ಜೆಸಿ ಸಪ್ತಾಹ ಸಂಯೋಜಕಿ ಹೇಮಾವತಿ, ಲೇಡಿ ಜೆಸಿ ಸಂಯೋಜಕಿ ಶೃತಿ ರಂಜಿತ್, ರಕ್ಷಿತ್ ಅಂಡಿಂಜೆ, ಶೈಲೇಶ್,ಪೂರ್ವಾಧ್ಯಕ್ಷರು ಜೆಸಿ ಪದಾಧಿಕಾರಿಗಳು, ಉಪಸ್ಥಿತರಿದ್ದರು.