ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

ನಾರಾವಿ: ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ ವೇದಮೂರ್ತಿ ಕೃಷ್ಣ ತಂತ್ರಿಯವರ ಪೌರೋಹಿತ್ಯದಲ್ಲಿ ಡಿ.22 ರಂದು ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಐದು ಮಾಗಣೆಯ ಗ್ರಾಮಸ್ಥರಿಂದ ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ಮಹಾ ಚಂಡಿಕಾಯಾಗದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆಯು ಡಿ.21 ರಂದು ಅರಸುಕಟ್ಟೆಯಿಂದ ಮೆರವಣಿಗೆ ಪ್ರಾರಂಭಗೊಂಡು ಶ್ರೀ ಸೂರ್ಯನಾರಾಯಣ ದೇವಸ್ಥಾನದವರೆಗೆ ನಡೆಯಿತು.

ವಿಜೃಂಭಣೆಯಿಂದ ನೆರವೇರಿದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಯಲ್ಲಿ ಕೀಳುಕುದುರೆ, ಚೆಂಡೆ, ಸುಡುಮದ್ದು, ಆಕರ್ಷಣೆಯ ಗೊಂಬೆಗಳು, ಮುದ್ದು ಶಾರದೆ, ಬಂಗಾಳಿ ಟೈಗರ್, ಕೇರಳದ ಪ್ರಸಿದ್ದ ವಯೊಲಿನ್ ವಾದಕಿ ಅಧ್ಯಾ ವಿಜಯನ್ ರವರ ವಯೊಲಿನ್ ವಾದನ ನೋಡುಗರ ಗಮನ ಸೆಳೆಯಿತು. ಮೆರವಣಿಗೆಯಲ್ಲಿ ಸುಮಾರು ಐದು ಸಾವಿರ ಮಂದಿ ಭಕ್ತರು ಭಾಗಿಯಾದರು.

ಮೆರವಣಿಗೆಯ ಬಳಿಕ ವೀರ ಸಾವರ್ಕರ್ ವೇದಿಕೆಯಲ್ಲಿ ವಯೊಲಿನ್ ವಾದಕಿ ಅಧ್ಯಾ ವಿಜಯನ್ ರವರ ವಯೊಲಿನ್ ವಾದನ ಮತ್ತು ಚೆಂಡೆ ಪ್ರದರ್ಶನ ನಡೆಯಿತು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಿ.ಯದುಪತಿ ಗೌಡರಿಗೆ ಗೌರವಾರ್ಪಣೆ

Suddi Udaya

ಮಾ.28: ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಕಾಸರಗೋಡು – ಕರ್ನಾಟಕ ಚುಟುಕು ಕವಿಗೋಷ್ಠಿ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆಒಲಿದು ಬಂದ “ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ -2025”

Suddi Udaya

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!