ಅಳದಂಗಡಿ: ಅಳದಂಗಡಿ ಅಜಿಲ ಸೀಮೆಯ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವವು ಜ. 8 ರಿಂದ 12 ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಇದರ ಮೊದಲ ಅಂಗವಾಗಿ ಬ್ರಹ್ಮಕಲಶೋತ್ಸವದ ಕಾರ್ಯಾಲಯದ ಉದ್ಘಾಟನೆ ಡಿ.22 ರಂದು ನಡೆಯಿತು.
ಬರೋಡ ಪ್ರಸಿದ್ದ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರು ಬ್ರಹ್ಮಕಲಶೋತ್ಸವದ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ನ ವ್ಯವಸ್ಥೆಯನ್ನು ಮಾಡುತ್ತೇನೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ವಹಿಸಿದ್ದರು.
ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಶಿವಪ್ರಸಾದ್ ಅಜಿಲ,ಕಾರ್ಯಾಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಪ್ರಸಿದ್ದ ಅಳದಂಗಡಿ ವೈದ್ಯರಾದ ಡಾ.ಎನ್.ಎಂ ತುಳಪುಳೆ, ಸ್ವಾತಿ ಡೆಂಟಲ್ ಕ್ಲಿನಕ್ ನ ಡಾ. ಶಶಿಧರ ಡೋಂಗ್ರೆ,ಪಿ.ಹೆಚ್ ನಿತ್ಯಾನಂದ ಶೆಟ್ಟಿ, ಯೋಜನಾಧಿಕಾರಿ ದಯಾನಂದ ಪೂಜಾರಿ ಉಪಸ್ಥಿತರಿದ್ದರು.ದೇವೇಂದ್ರ ಹೆಗ್ಡೆ ಕೊಕ್ರಾಡಿ ಸ್ವಾಗತಿಸಿ,ಸದಾನಂದ ಪೂಜಾರಿ ಉಂಗೀಲಬೈಲು ವಂದಿಸಿದರು.ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.