September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

ಅಳದಂಗಡಿ: ಅಳದಂಗಡಿ ಅಜಿಲ ಸೀಮೆಯ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವವು ಜ.8 ರಿಂದ 12 ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಇದರ ಮೊದಲ ಅಂಗವಾಗಿ ಬ್ರಹ್ಮಕಲಶೋತ್ಸವದ ಕಾರ್ಯಾಲಯದ ಉದ್ಘಾಟನೆ ಡಿ.22 ರಂದು ನಡೆಯಿತು.

ಬರೋಡ ಪ್ರಸಿದ್ದ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರು ಬ್ರಹ್ಮಕಲಶೋತ್ಸವದ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ನ ವ್ಯವಸ್ಥೆಯನ್ನು ಮಾಡುತ್ತೇನೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ವಹಿಸಿದ್ದರು.

ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಶಿವಪ್ರಸಾದ್ ಅಜಿಲ,ಕಾರ್ಯಾಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಪ್ರಸಿದ್ದ ಅಳದಂಗಡಿ ವೈದ್ಯರಾದ ಡಾ.ಎನ್.ಎಂ ತುಳಪುಳೆ, ಸ್ವಾತಿ ಡೆಂಟಲ್ ಕ್ಲಿನಕ್ ನ ಡಾ. ಶಶಿಧರ ಡೋಂಗ್ರೆ,ಪಿ.ಹೆಚ್ ನಿತ್ಯಾನಂದ ಶೆಟ್ಟಿ, ಯೋಜನಾಧಿಕಾರಿ ದಯಾನಂದ ಪೂಜಾರಿ ಉಪಸ್ಥಿತರಿದ್ದರು.

ದೇವೇಂದ್ರ ಹೆಗ್ಡೆ ಕೊಕ್ರಾಡಿ ಸ್ವಾಗತಿಸಿ,ಸದಾನಂದ ಪೂಜಾರಿ ಉಂಗೀಲಬೈಲು ವಂದಿಸಿದರು.ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಸ.ಪ್ರೌ. ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಅಂತರಿಕ ಕಚ್ಚಾಟ ಬಹಿರಂಗ: ಬೂತುಗಳಲ್ಲಿ ಹಣ ಸಮರ್ಪಕವಾಗಿ ನಿರ್ವಹಣೆಯಾಗಿಲ್ಲ ಎಂದು ಹೇಳಿದ ಕಾರ್ಯಕರ್ತನನ್ನು ತಡೆದ ಬಂಗೇರ: ಬಂಗೇರ ಮಾತನ್ನು ವಿರೋಧಿಸಿ, ಸಭೆಯಿಂದ ಹೊರ ನಡೆದ ಪತ್ರಕರ್ತರು

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ

Suddi Udaya

ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಯಲ್ಲಿ 78ರ ಸ್ವಾತಂತ್ರ್ಯ ಸಂಭ್ರಮ ಹಾಗೂ ಪವರ್ ಮೆನ್‌ಗೆ ಗೌರವಾರ್ಪಣೆ

Suddi Udaya
error: Content is protected !!