ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ್ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ, ಮತ್ತು ಸಚಿವೆ ವಿರುದ್ಧ ಸಿ.ಟಿ ರವಿ ನೀಡಿದ ಹೇಳಿಕೆ ವಿರೋಧಿಸಿ
ಪ್ರತಿಭಟನೆ ಡಿ.23ರಂದು ಬೆಳ್ತಂಗಡಿ ತಾಲ್ಲೂಕು ಕಛೇರಿ ಮುಂಭಾಗದಲ್ಲಿ ಜರುಗಿತು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ, ಮಹಿಳಾ ಕಾಂಗ್ರೆಸ್ ಮುಖಂಡೆ ಲೋಕೇಶ್ವರಿ ವಿನಯಚಂದ್ರ ಮಾತನಾಡಿ ಇಬ್ಬರ ನಿಂದನಾತ್ಮಕ ಹೇಳಿಕೆಯನ್ನು ಖಂಡಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ , ಪ್ರವೀಣ್ ಫೆರ್ನಾಂಡಿಸ್ , ಜಯವಿಕ್ರಮ ಕಲ್ಲಾಪು, ಈಶ್ವರ ಭಟ್, ಕೇಶವ ಗೌಡ ಬೆಳಾಲು, ಪ್ರಮೋದ್ ಮಚ್ಚಿನ, ಅಬ್ದುಲ್ ರಜಾಕ್ ತೆಕ್ಕಾರು, ಇಸುಬು ಇಳಂತಿಲ, ಅಬ್ದುಲ್ ರಹಿಮಾನ್ ಪಡ್ಪು, ಮಹಿಳಾ ಕಾಂಗ್ರೇಸ್ ಘಟಕ ಗ್ರಾಮೀಣ ಸಮಿತಿ ಅಧ್ಯಕ್ಷೆ ಶ್ರೀಮತಿ ನಮಿತಾ ಕೆ. ಪೂಜಾರಿ, ಮಹಿಳಾ ನಗರ ಕಾಂಗ್ರೆಸ್ ಅಧ್ಯಕ್ಷ ವಂದನಾ ಭಂಡಾರಿ, ಬೆಳ್ತಂಗಡಿ ನಗರ ಪಂಚಾಯತ್ ಸದಸ್ಯ ಜಗದೀಶ್ ಡಿ, ಎಸ್ ಸಿ ಘಟಕದ ಅಧ್ಯಕ್ಷ ನೇಮಿರಾಜ್ ಕಿಲ್ಲೂರು, ವಿಜಯ ಕುಮಾರ್ ಬಜಿರೆ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್, ಆಶ್ರಫ್ ನೆರಿಯ, ಹನೀಫ್ ಲಾಯಿಲ, ದೇಜಪ್ಪ ಶೆಟ್ಟಿ ಪ್ರಭಾಕರ ಹೆಗ್ಡೆ ಅಟ್ಲಾಜೆ ಮೊದಲಾದವರು ಉಪಸ್ಥಿತರಿದ್ದರು.
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿ ಸ್ವಾಗತಿಸಿದರು., ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ವಂದಿಸಿದರು.