ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ ಕೆ ಇವರ ಅಧ್ಯಕ್ಷತೆಯಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆಯು ಡಿ .18ರಂದು ಜರಗಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಬೇನಾಡಿಕ್ಟ್ ಸಾಲ್ದಾನ, ಮರಿಯಮ್ಮ, ಮಹೇಶ ಕೆ ಹಾಗೂ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀನಿವಾಸ ಡಿ ಪಿ, ಲೆಕ್ಕಸಹಾಯಕರಾದ ಸುಪ್ರಿತಾ ಶೆಟ್ಟಿ ಕರ್ನೋಡಿ, ಶಾಲಾ ಮುಖ್ಯ ಶಿಕ್ಷಕರಾದ ಜಗನ್ನಾಥ್ ಕುಂಟಿನಿ, ಪಡ್ಲಾಡಿ ಶಾಲಾ ಸಹಶಿಕ್ಷಕರು , ಆರೋಗ್ಯ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಕರ್ನೋಡಿ, ಶಾಲಾ ವಿದ್ಯಾರ್ಥಿ ನಾಯಕಿ ಹೇಮಲತಾ ರವರು ಉಪಸ್ಥಿತರಿದ್ದರು.

ಭಾರತ ಸಂವಿದಾನದ ಪ್ರಯುಕ್ತ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ 3 ಶಾಲೆಗಳ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜನೆ ಮಾಡಿದ್ದು ವಿಜೇತ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು ಹಾಗೂ ಮಕ್ಕಳಿಗೆ ಸಭೆಯಲ್ಲೇ ರಸಪ್ರಶ್ನೆಗಳನ್ನು ಕೇಳಿ ಬಹುಮಾನವನ್ನು ನೀಡಲಾಯಿತು.

ಮಕ್ಕಳ ಹಕ್ಕುಗಳ ಗ್ರಾಮ ಸಭೆಯ ಮಹತ್ವದ ಕುರಿತು ಪಂಚಾಯತ್ ಅಭಿವೃದ್ದಿ ಅಧಿಕಾರಿಯವರು ಪ್ರಸ್ಥಾವಿಕವಾಗಿ ಮಾತಾಡಿದರು . ಮಕ್ಕಳ ಹಕ್ಕು ಹಾಗೂ ಕರ್ತವ್ಯಗಳ ಬಗ್ಗೆ ಮಹೇಶ್ ಕೆ ಹಾಗೂ ಆಶಾ ಸಾಲ್ದಾನ ರವರು ತಿಳಿಸಿದರು . ಆರೋಗ್ಯ ಇಲಾಖೆಗೆ ಸಂಬಂಧ ಪಟ್ಟ ಮಾಹಿತಿಯನ್ನು ಅರೋಗ್ಯ ಕಾರ್ಯಕರ್ತೆಯದ ಸರಸ್ವತಿ ನೀಡಿದರು. ಮಕ್ಕಳಿಂದ ವಿವಿಧ ಬೇಡಿಕೆಗಳನ್ನು ಸ್ವೀಕರಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಬಿಲ್ ವಸೂಲಿಗರರಾದ ಮೋಹನ ಸ್ವಾಗತಿಸಿದರು. ಸುಪ್ರಿತಾ ಶೆಟ್ಟಿ ನಿರೂಪಿಸಿ, ಧನ್ಯವಾದವಿತ್ತರು.

Related posts

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಸೋಣಂದೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya

ಕಣಿಯೂರು ದೀಪಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya
error: Content is protected !!