September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಇಲಾಖಾ ಸಚಿವ ಈಶ್ವ‍ರ್ ಖಂಡ್ರೆ ರವರು ಕುಟುಂಬ ಸಮೇತರಾಗಿ ಡಿ.23 ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಈಶ್ವ‍ರ್ ಖಂಡ್ರೆ , ಪತ್ನಿ ಗೀತಾ ಖಂಡ್ರೆ, ಪುತ್ರ ಬಿದರ್ ಸಂಸದ ಸಾಗರ್ ಖಂಡ್ರೆ ಹಾಗೂ ಪತ್ನಿ ಗೀತಾ ಖಂಡ್ರೆ ಸಹೋದರರಾದ ಹೈಕೋರ್ಟ್ ಎಸ್.ಪಿ.ಪಿ ವಿಜಯ ಕುಮಾರ್ ಮಜ್ಜಿಗೆ ಹಾಗೂ ವಕೀಲ ಗಂಗಾಧರ್ ಮಜ್ಜಿಗೆ, ಕಾಂಗ್ರೆಸ್ ಎ.ಸಿ ಮೋರ್ಚಾದ ಅಧ್ಯಕ್ಷ ಲಕ್ಷ್ಮಿ ನಾರಾಯಣ ಸ್ವಾಮಿ ರವರು ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಂಗಳೂರು ಡಿಸಿಎಫ್ ಮರಿಯಪ್ಪ ಕರಿಕಳನ್, ಅರಣ್ಯ ಇಲಾಖೆಯ (FMS) ಮಂಗಳೂರು ಡಿ.ಸಿ.ಎಫ್ ಶ್ರೀಕಾಂತ್ ಖಣದಾಳಿ, ಬೆಳ್ತಂಗಡಿ ಆರ್.ಎಫ್.ಓ ತ್ಯಾಗರಾಜ್, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ ಮತ್ತಿತರ ಕಾರ್ಯಕರ್ತರು ಭಾಗಿಯಾಗಿದ್ದರು.

Related posts

ಹಳೇಪೇಟೆ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ನೂತನ ಟ್ರಸ್ಟಿಯಾಗಿ ಬಿ ಪೀತಾಂಬರ ಹೆರಾಜೆ

Suddi Udaya

ಪುಂಜಾಲಕಟ್ಟೆ : 3ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಗುರು ಗಾಂಧಿ ಸಂವಾದ ಕಾರ್ಯಕ್ರಮ ಮತ್ತು ಕೋಟಿ ಚೆನ್ನಯ್ಯ ಕ್ರೀಡಾಕೂಟದ ಪೂರ್ವಭಾವಿ ಸಭೆ

Suddi Udaya
error: Content is protected !!