ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆಯು ಡಿ.23 ರಂದು ಉಜಿರೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ ರವರು ದೀಪ ಪ್ರಜ್ವಲನೆಗೊಳಿಸಿ, ಮಾತನಾಡಿ, ಇಲಾಖೆಯ ಎಲ್ಲಾ ಚಟುವಟಿಕೆಗಳಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರೋತ್ಸಾಹ ನೀಡುತ್ತ ಬರುತ್ತಿದ್ದಾರೆ. ಉತ್ತಮ ಶಿಕ್ಷಕ ಸಮುದಾಯದ ಅಡಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುತ್ತಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಅನೇಕ ವಿಚಾರಗಳನ್ನು ತಿಳಿದುಕೊಳ್ಳಬೇಕು. ಪುಸ್ತಕದ ಜ್ಞಾನದ ಜೊತೆಗೆ ಪ್ರಾಪಂಚಿಕ ಜ್ಞಾನವೂ ಬೇಕು. ವಾರ್ಷಿಕ ಪರೀಕ್ಷೆಗಳಿಗೆ ತಯಾರಾಗುವುದು ಅಗತ್ಯ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರ ಪಾತ್ರ ಮಹತ್ವವಾದದ್ದು ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ವೇದಿಕೆ ವಾರ್ಷಿಕ ಪ್ರತಿಭಾ ದಿನಾಚರಣೆ. ವೇದಿಕೆಯನ್ನು ಸದುಪಯೋಗ ಪಡಿಸಿಕೊಂಡರೆ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಗುರಿ ಇಟ್ಟುಕೊಂಡು ಶ್ರಮವಹಿಸಿ ಓದಬೇಕು ಎಂದರು.

ಈ ಸಂದರ್ಭದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯರಾದ ಆರ್ ಎನ್ ಪೂವಣಿ, ನಿಲಯ ಪಾಲಕರಾದ ಯತೀಶ್ ಕೆ ಬಳಂಜ, ಶಿಕ್ಷಕರಾದ ರವಿಚಂದ್ರ ಬಿ, ಶಾಲಾ ಹಿರಿಯ ವಿದ್ಯಾರ್ಥಿ ಹಾಗೂ ಸುದ್ದಿ ಉದಯ ಪತ್ರಿಕೆಯ ವರದಿಗಾರ ಸುದಿತ್, ಶಿಕ್ಷಕ ವೃಂದದವರು, ವಿದ್ಯಾರ್ಥಿ ನಾಯಕರುಗಳು, ಪೋಷಕರು, ಅಕ್ಷರ ದಾಸೋಹದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರು ಸುರೇಶ್ ಪ್ರಸ್ತಾವಿಸಿ, ಸ್ವಾಗತಿಸಿದರು. ಶಿಕ್ಷಕಿ ತ್ರಿವೇಣಿ ನಿರೂಪಿಸಿದರು.

Related posts

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಪುದುವೆಟ್ಟು ಹಿಂದೂ ಸೇವಾ ಸಮಿತಿ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ 108 ತೆಂಗಿನಕಾಯಿ ಗಣಹೋಮ : ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

Suddi Udaya

ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ

Suddi Udaya
error: Content is protected !!