April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್ ಆಚರಣೆ


ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಡಿ.21 ರಂದು ಕ್ರಿಸ್ಮಸ್ ಆಚರಣೆಯನ್ನು ಬೆಳ್ತಂಗಡಿ, ಸಾಂತೋಮ್ ಟವರ್ ನಲ್ಲಿ ಆಯೋಜಿಸಲಾಗಿತ್ತು.


ಸೈಂಟ್ ಥೋಮಸ್ ಚರ್ಚ್ ಗಂಡಿಬಾಗಿಲು ಧರ್ಮಗುರುಗಳಾದ ವಂದನೀಯ ಫಾ. ಜೋಸ್ ಆಯಾಂಕುಡಿ ಕಾರ್ಯಕ್ರಮದ ಪ್ರಾರಂಭದ ಸವಿನೆಪುಗಳನ್ನು ನೆನಪಿಸಿ ಕೇಕ್ ಕತ್ತರಿಸುವ ಮೂಲಕ ಕ್ರಿಸ್ಮಸ್ ಸಂದೇಶ ನೀಡಿದರು. ಸೈಂಟ್ ತೋಮಸ್ ಪ್ರೌಢಶಾಲೆ ಗಂಡಿಬಾಗಿಲು ಇಲ್ಲಿಯ ಪ್ರಾಧ್ಯಾಪಕ ಥೋಮಸ್ ಪಿ. ಎ ಹಾಗೂ ಸ್ನೇಹಕಿರಣ್ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಏಲೀಯಮ ತೋಮಸ್ ಇವರು ಆಹಾರ ಕಿಟ್ ವಿತರಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಸಿಸ್ಟರ್ ಸೆಲಿನ್ ಮದರ್ ಸುಪಿರಿಯರ್ ಎಸ್.ಎ.ಬಿ. ಎಸ್ ಕಾನ್ವೆಂಟ್, ಗಂಡಿಬಾಗಿಲು ಇವರು ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮದ ಲಕ್ಕಿ ಪರ್ಸನ್ ಆಫ್ ದಿ ಇಯರನ್ನು ಆಯ್ಕೆ ಮಾಡಿ, ಮಾತೃವೇದಿ ಸಂಘಟನೆಯ ಅಧ್ಯಕ್ಷೆ ಶ್ರೀಮತಿ ಪ್ರಭಾ ಇವರು ಶ್ರೀಮತಿ ಯಶೋದರವರಿಗೆ ಬಹುಮಾನ ವಿತರಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ನವ ಜೀವನ ಬೆಂಬಲ ಕಾರ್ಯಕ್ರಮದ ಸದಸ್ಯರು ವಿವಿಧ ಗೀತೆಗಳನ್ನು ಹಾಡಿ ಎಲ್ಲರ ಮನರಂಜಿಸಿದರು.
ಹಾಗೂ ಮಾತೃ ವೇದಿ ಸಂಘಟನೆಯ ಸದಸ್ಯರು ಕ್ರಿಸ್ಮಸ್ ಕ್ಯಾರೋಲ್ ಹಾಡನ್ನು ಹಾಡಿದರು.
ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನೇತೃತ್ವದಲ್ಲಿ ನವಜೀವನ ಕುಟುಂಬದ ಸದಸ್ಯರಿಗೆ ನೀಡಿರುವ ಸೇವೆಗೆ ಕೃತಜ್ಞತಾ ಭಾವವಾಗಿ ನವಜೀವನ ಕುಟುಂಬದ ಸದಸ್ಯರು ಕಿರುಕಾಣಿಕೆಯನ್ನು ಡಿ. ಕೆ ಆರ್.ಡಿ. ಎಸ್ ಸಂಸ್ಥೆಗೆ ಹಾಗೂ ವ. ಫಾದರ್ ಜೋಸ್ ಆಯಾಂಕುಡಿ ಇವರಿಗೆ ನೀಡಿದರು.


ಶ್ರೀಮತಿ ಲಲಿತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ
ಫಾ. ಬಿನೋಯಿ ಎ.ಜೆ. ಪ್ರಾಸ್ತವಿಕ ನುಡಿಯನ್ನು ಆಡಿದರು. ನವ ಜೀವನ ಬೆಂಬಲ ಕಾರ್ಯಕ್ರಮದ ಸದಸ್ಯೆ ಶ್ರೀಮತಿ ಪುಷ್ಪರವರು ಪ್ರಾರ್ಥನೆ ಹಾಡಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ವಿದ್ಯಾನಿಧಿ ಸಂಯೋಜಕಿ ಶ್ರೀಮತಿ ಜಿನಿ ಸ್ವಾಗತಿಸಿ,
ಕಾರ್ಯಕರ್ತರಾದ ಮಾರ್ಕ್ ಡಿ ಸೋಜರವರು ಕಾರ್ಯಕ್ರಮನ್ನು ವಂದಿಸಿದರು.


ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕಿ ಕು. ಶ್ರೇಯಾರವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

Suddi Udaya
error: Content is protected !!