April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

ಬೆಳ್ತಂಗಡಿ: ಗುರುವಾಯನಕೆರೆ, ಕಾರ್ಕಳ ಮೂಡುಬಿದ್ರೆ ಕೂಡು ರಸ್ತೆಯ ಶಕ್ತಿನಗರ ಸರ್ಕಲ್ ನಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು 5 ಬಾರಿ ಪ್ರತಿನಿಧಿಸಿರುವ ಬಡವರವರ ಪರ ಹೋರಾಟ ಮಾಡಿದ ಭ್ರಷ್ಟಾಚಾರವನ್ನು ಕಠಿಣ ಶಬ್ದಗಳಲ್ಲಿ ವಿರೋಧಿಸುತ್ತಿದ್ದ ನೇರ ನಡೆನುಡಿಯ ನಾಯಕ ಕುವೆಟ್ಟು ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿರುವ ದಿ| ಕೆ ವಸಂತ ಬಂಗೇರವರ ಪುತ್ಥಳಿಯನ್ನು ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಕಾರ್ಕಳ ಮೂಡುಬಿದರೆ ಕೂಡು ರಸ್ತೆಯ ಶಕ್ತಿನಗರ ಸರ್ಕಲ್ ನಲ್ಲಿ ಸ್ಥಾಪನೆ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ರವರಿಗೆ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ , ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೆಡಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ತಾಲೂಕು ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಆಯುಬ್ ಡಿ.ಕೆ, ತಾಲೂಕು ಅಸಂಘಟಿತ ಕಾರ್ಮಿಕ ಸಮಿತಿಯ ಅಧ್ಯಕ್ಷ ಅಬ್ದುಲ್ ರಜಾಕ್, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಡಾ. ರಾಜಾರಾಮ್ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಲಂದರ್ ಕೊಕ್ಕಡ, ಧನಂಜಯ್ ರಾವ್ ಕುವೆಟ್ಟು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya
error: Content is protected !!