23.1 C
ಪುತ್ತೂರು, ಬೆಳ್ತಂಗಡಿ
December 23, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಅಂತಾರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.

ವಿಶೇಷ ವಿಜ್ಞಾನ ಪ್ರಯೋಗದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಯಕ್ರಮದ ಮುಖ್ಯ ಅತಿಥಿ ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್ “ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ವಿಜ್ಞಾನವನ್ನು ಅಳವಡಿಸಿಕೊಂಡು ಹೊಸ ಆವಿಷ್ಕಾರಗಳನ್ನು ಮಾಡುತ್ತಾ ಭವಿಷ್ಯದಲ್ಲಿ ಉತ್ತಮ ವಿಜ್ಞಾನಿಗಳಾಗಿ ದೇಶ ಸೇವೆಯನ್ನು ಮಾಡಬೇಕು ಮತ್ತು ಅದಕ್ಕೆ ಬೇಕಾದ ಸಂಪೂರ್ಣ ಸಹಕಾರವನ್ನು ನೀಡುವ ಭರವಸೆಯನ್ನು ನೀಡಲಾಗುವುದು ” ಎಂದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ರಾಷ್ಟ್ರೀಯ ಗಣಿತ ದಿನಾಚರಣೆಯ ಮಹತ್ವವನ್ನು ವಿಶೇಷ ವಿವರಣೆಯೊಂದಿಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಹತ್ತನೆ ತರಗತಿಯ ವಿದ್ಯಾರ್ಥಿ ಮುಹಮ್ಮದ್ ಶಿಹಾಬುದ್ದಿನ್ ಕಾರ್ಯಕ್ರಮವನ್ನು ನಿರೂಪಿಸಿದರು. 8ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಜಾಫರ್ ಅತಿಥಿಗಳನ್ನು ಸ್ವಾಗತಿಸಿದರು. 8ನೇ ತರಗತಿಯ ವಿದ್ಯಾರ್ಥಿ ಮುನಾವರ್ ಧನ್ಯವಾದವಿತ್ತರು. ವಿದ್ಯಾರ್ಥಿಗಳು ತಯಾರಿಸಿದ ಬೇರೆ ಬೇರೆ ವಿಜ್ಞಾನದ ಮಾದರಿಗಳ ವಸ್ತುಪ್ರದರ್ಶನ ಅತಿಥಿಗಳ ಪ್ರಶಂಷೆಗೆ ಕಾರಣವಾಯಿತು.

Related posts

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

Suddi Udaya

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಭಾರೀ ಮಳೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ

Suddi Udaya
error: Content is protected !!