19.7 C
ಪುತ್ತೂರು, ಬೆಳ್ತಂಗಡಿ
December 26, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

ಧರ್ಮಸ್ಥಳ: ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ಡಿ. 23 ರಂದು ಧರ್ಮಸ್ಥಳದ ಬೀಡು ಕಛೇರಿಯಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರು   ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಸಿರಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಹೇಮಾವತಿ ವೀ ಹೆಗ್ಗಡೆ ದಂಪತಿಗಳು ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ  ವಾಲ್ ಕ್ಯಾಲೆಂಡರನ್ನು ಮತ್ತು ಟೇಬಲ್ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಿ  ಶುಭ ಹಾರೈಸಿದರು.

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನರವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಪರಮಪೂಜ್ಯ ದಂಪತಿಗಳಿಗೆ ಗೌರವಾರ್ಪಣೆ ಸಲ್ಲಿಸಿದರು. 

ಅದೇ ರೀತಿ ಸಿರಿ ಕ್ಯಾಲೆಂಡರ್ ಮುದ್ರಣ ಕಾರ್ಯದಲ್ಲಿ ಸಹಕರಿಸಿದ ಮಂಜುಶ್ರೀ ಪ್ರಿಂಟರ್ಸ್ ನ ಶೇಖರ್ ಹಾಗೂ ಸಿರಿ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನ,  ಸಿರಿ ಸಂಸ್ಥೆಯ  ವಿವಿಧ ವಿಭಾಗಗಳ ಮೇಲಾಧಿಕಾರಿಗಳು ಹಾಗೂ ಮಾರುಕಟ್ಟೆ ವಿಭಾಗದ ವಿವಿಧ ವಲಯಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

Suddi Udaya

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

Suddi Udaya

ಜ.13: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ

Suddi Udaya

ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ

Suddi Udaya

ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ

Suddi Udaya
error: Content is protected !!