ಬಂದಾರು ಗ್ರಾಮ ಪಂಚಾಯಿತಿ ನಲ್ಲಿ ನಡೆದ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮದಲ್ಲಿ ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕಿ ಉಷಾ ನಾಯಕ್ ಅವರು ಪ್ರಧಾನ ಮಂತ್ರಿ ಜೀವನ್ ಸುರಕ್ಷಾ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ, ಅಟಲ್ ಪಿಂಚಣಿ ಮತ್ತು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ ಧನ್ ಯೋಜನೆಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಅನಿತಾ ಉಪಸ್ಥಿತರಿದ್ದರು. ಸಭೆಯಲ್ಲಿ ಕೆನರಾ ಬ್ಯಾಂಕ್ ನ ಮುಖ್ಯ ಪ್ರಬಂಧಕ ರೂಪೇಶ್ ರವರು ಕೆನರಾ ಏಂಜಲ್ ಅಕೌಂಟ್, ಎಸ್.ಹೆಚ್.ಜಿ ಲೋನ್ ಬಗ್ಗೆ ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬಂದಾರು ವಲಯದ ಮೇಲ್ವಿಚಾರಕಿಯಾದ ಸುಮಾನರವರು ಕಪಿಲ ಸ್ತ್ರೀಶಕ್ತಿ ಬ್ಯಾಂಕ್,ಬ್ಲಾಕ್ ಸೊಸೈಟಿ ಮೆಂಬರ್ ಆಗುವ ಬಗ್ಗೆ, ಬಾಲ ವಿಕಾಸ ಸಮಿತಿಯ ನಿಯಮ ಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು.
ಸಭೆಯ ನಂತರ PMJSBY, PMJJBY, APY ಬಗ್ಗೆ ನೋಂದಾವಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಗೊಂಚಲು ಸಭೆಯ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.