September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.23ರಂದು ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಸೇಕ್ರೆಡ್ ಹಾರ್ಟ್ ಕೆಳಅಂತಸ್ತಿನ ಸಭಾಭವನದಲ್ಲಿ ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು. ವಿದ್ಯಾರ್ಥಿಗಳು ಹಾಡು ನೃತ್ಯ ನಾಟಕದ ಮೂಲಕ ಕ್ರಿಸ್ಮಸ್ ಹಬ್ಬದ ಮಹತ್ವವನ್ನು ಪ್ರದರ್ಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ವಹಿಸಿ ಮಾತನಾಡಿ ನಾವು ನಮ್ಮ ಜೀವನದಲ್ಲಿ ಎಲ್ಲವನ್ನೂ ಪ್ರೀತಿಸುವ, ಗೌರವಿಸುವ ಗುಣವನ್ನು ಅಳವಡಿಸಿಕೊಳ್ಳಬೇಕೆಂದು ಹೇಳಿ, ಮಕ್ಕಳಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗರ್ಡಾಡಿ ಚರ್ಚ್ ನ ಧರ್ಮ ಗುರುಗಳಾದ ವಂ|ಸ್ವಾ| ಆರ್ಥರ್ ಪ್ರಶಾಂತ್ ಮೀನೇಜಸ್ ಮಾತನಾಡಿ ಕ್ರಿಸ್ಮಸ್ ಹಬ್ಬ ನಮಗೆಲ್ಲರಿಗೂ ಶಾಂತಿ ಸಮಾಧಾನವನ್ನು ತರಲಿ ಎಂದು ಹೇಳಿ, ಮಕ್ಕಳಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ| ಸ್ವಾ | ದೀಪಕ್ ಲಿಯೊ ಡೇಸರವರು, ಪುಂಜಾಲಕಟ್ಟೆ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಚೇತನರವರು, ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸೂರಜ್ ಚಾಲ್ಸ್ ನ್ಯೂನಸ್ ರವರು, ಗಾಡಿಯನ್ ಏಂಜಲ್ಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ಹೆಲೆನ್ ಮೋನಿಕರವರು, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು, ಶಿಕ್ಷಕ- ಶಿಕ್ಷಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಗ್ಲೆನ್ಸನ್ ಮತ್ತು ಸನ ನಿರೂಪಿಸಿ, ನಿಧಿಶ್ ಶೆಟ್ಟಿರವರು ಸ್ವಾಗತಿಸಿ, ಮಹಮ್ಮದ್ ಅನೀಕ್ ಧನ್ಯವಾದವಿತ್ತರು.

Related posts

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ, ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಮಚ್ಚಿನ: ಕುದ್ರಡ್ಕ ಭಜನೋತ್ಸವ-2026 ಕಾರ್ಯಕ್ರಮ

Suddi Udaya

ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ :8 ಮಂದಿ ಆರೋಪಿಗಳ ವಿರುದ್ಧ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

Suddi Udaya

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya

ಜ.31-ಫೆ.4: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!