September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

ಮುಂಡಾಜೆ: ವಿದ್ಯುತ್ ಲೈನ್ ನ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ಪರಿವರ್ತಕದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಗುಡ್ಡಕ್ಕೆ ಬೆಂಕಿ ಬಿದ್ದ ಪ್ರಕರಣ ಮುಂಡಾಜೆಯ ಕಡಂಬಳ್ಳಿ ಎಂಬಲ್ಲಿ ಡಿ.24 ರಂದು ನಡೆದಿದೆ. ಮರ ವಿದ್ಯುತ್ ಲೈನ್ ಮತ್ತು ರಸ್ತೆ ಮೇಲೆ ಉರುಳಿ ಬಿದ್ದಾಗ ಎರಡು ಎಲ್ ಟಿ ವಿದ್ಯುತ್ ಕಂಬಗಳು ಧರಾಶಾಯಿಯಾಗಿವೆ. ಈ ವೇಳೆ ಬೆಂಕಿ ಉತ್ಪತ್ತಿಯಾಗಿ ಸುಮಾರು ಒಂದು ಎಕರೆಯಷ್ಟು ಗುಡ್ಡ ಪ್ರದೇಶ ಸುಟ್ಟು ಹೋಗಿದೆ.

ಗುಡ್ಡದ ಸಮೀಪದಲ್ಲಿ ರಬ್ಬರ್ ತೋಟವಿದ್ದು ಅಲ್ಲಿಗೆ ಬೆಂಕಿ ಪಸರಿಸದಂತೆ ಸ್ಥಳೀಯರು ಸಹಕರಿಸಿದರು. ರಬ್ಬರ್ ತೋಟಕ್ಕೆ ಬೆಂಕಿ ಪಸರಿಸುತ್ತಿದ್ದರೆ ಹೆಚ್ಚಿನ ನಷ್ಟ ಉಂಟಾಗುತ್ತಿತ್ತು. ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಮೆಸ್ಕಾಂ ನವರು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿದ ಕಾರಣ ಹೆಚ್ಚಿನ ಅಪಾಯ ತಪ್ಪಿದೆ. ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಲಿಂಗ ಸೂಕ್ಷ್ಮತೆ ಅರಿವು ತರಬೇತಿ

Suddi Udaya

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

Suddi Udaya

ಸರಕಾರಿ ಅರಣ್ಯ ಭೂಮಿಯನ್ನು ಅತಿ ಕ್ರಮಿಸಿ ಕೃಷಿ ಮಾಡಿದ ಪ್ರಕರಣ : ಹೈಕೋರ್ಟ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ ತೆರವು

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ವೇಣೂರು ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!