ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜೆಸಿ ಸಪ್ತಾಹ ಕಾರ್ಯಕ್ರಮದಲ್ಲಿ ಮಂಗಳೂರು ಡ್ರೀಮ್ ಡೀಲ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮಹಮ್ಮದ್ ಸುಹೈಲ್ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್ ಡಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಜೆಸಿಐ ವಲಯಾಧ್ಯಕ್ಷ ಗೀರೀಶ್ ಎಸ್.ಪಿ, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಜೆಎಸಿ ನಿರ್ದೇಶಕ ಕಿರಣ್ ಕುಮಾರ್ ಶೆಟ್ಟಿ, ವಲಯ ಉಪಾಧ್ಯಕ್ಷ ಶಂಕರ್ ರಾವ್, ಯುವ ಉದ್ಯಮಿ ನಿಸಾರ್ ಮೊದಲಾದವರು ಉಪಸ್ಥಿತರಿದ್ದರು.