ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನೀಡಿದ ರೂ.85000 ಮೌಲ್ಯದ ಬೆಂಚ್ ಡೆಸ್ಕ್ ಹಸ್ತಾಂತರ ಕಾರ್ಯಕ್ರಮ ಜರುಗಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ವಿಭಾಗದ ಮೇಲ್ವಿಚಾರಕರಾದ ಶ್ರೀಮತಿ ಯಶೋಧ ಇವರು ಹಸ್ತಾಂತರ ಮಾಡಿದರು.
ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ನಿರತ ಶ್ರೀಮತಿ ಜಾನಕಿ ಎಸ್, ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಶಾಲಾ ಮುಖ್ಯೋಪಾಧ್ಯಾಯ ಭಾಸ್ಕರ್, ಎಸ್.ಡಿ.ಎಮ್.ಸಿ ಸದಸ್ಯರು ಹಾಗೂ ಅಧ್ಯಾಪಕ ವೃಂದ ಭಾಗವಹಿಸಿದರು.
ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿ, ವಂದಿಸಿದರು.