ಅಳದಂಗಡಿ: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವವು ಜ.8 ರಿಂದ ಜ.12 ರವರಗೆ ನಡೆಯಲಿದ್ದು ಇದರ ಸಮಿತಿ ರಚನೆಯು ಇತ್ತೀಚೆಗೆ ಜರುಗಿತು.
ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆ, ಸ್ವಾಗತ ಸಮಿತಿ ಅಧ್ಯಕ್ಷರಾಗಿ ಶಶಿಧರ ಶೆಟ್ಟಿ ಬರೋಡ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು, ಕಾರ್ಯಾಧ್ಯಕ್ಷರಾಗಿ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಪ್ರಧಾನ ಸಂಚಾಲಕರಾಗಿ ಶಿವಪ್ರಸಾದ ಅಜಿಲರು, ಪ್ರಧಾನ ಕಾರ್ಯದರ್ಶಿಯಾಗಿ ಪಿ. ಹೆಚ್ ನಿತ್ಯಾನಂದ ಶೆಟ್ಟಿ ನೊಚ್ಚ ಆಯ್ಕೆಯಾಗಿದ್ದಾರೆ.
ಗೌರವ ಸಲಹೆಗಾರರಾಗಿ ಮಂಗಳೂರು ಲೋಕಸಭಾ ಸದಸ್ಯ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಮಾಜಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕಳ, ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಆಯ್ಕೆಯಾಗಿದ್ದಾರೆ.