ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನ‘ಕೆರೆಗೆ’ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಡಿ.26ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆರೆಯ ಅವ್ಯವಸ್ಥೆ ಹಾಗೂ ಒತ್ತುವರಿಯ ಬಗ್ಗೆ ಲೋಕಾಯುಕ್ತಕ್ಕೆ ದೂರು ಬಂದಿದ್ದ ಹಿನ್ನಲೆ ಬಿ.ಎಸ್.ಪಾಟೀಲ್ ಅವರು ಕುವೆಟ್ಟು ಪಂಚಾಯತ್ ಅಧಿಕಾರಿಗಳು, ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ತಹಶೀಲ್ದಾರ್ ನೇತೃತ್ವದಲ್ಲಿ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ್ದು.ಈ ವೇಳೆ ಕೆರೆಯ ಸುತ್ತಮುತ್ತಲಿನ ಪ್ರದೇಶದ ವಾತಾವರಣ ನೋಡಿ ಅಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದು. ಕೆರೆಯ ಸುತ್ತ ಕಾರಿಡಾರ್ ನಿರ್ಮಿಸಿ ಸರಿಯಾದ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು, ಅಲ್ಲದೆ ಕೆರೆಯ ಒತ್ತುವರಿಯ ಬಗ್ಗೆ ಹತ್ತು ದಿನದ ಒಳಗೆ ಸರ್ವೆ ನಡೆಸಿ ವರದಿ ನೀಡುವಂತೆ ಬೆಳ್ತಂಗಡಿ ತಹಶೀಲ್ದಾರರಿಗೆ ಸ್ಥಳದಲ್ಲಿಯೇ ಸೂಚಿಸಿದರು.
ಲೋಕಾಯುಕ್ತ ನ್ಯಾಯಮೂರ್ತಿ ಭೇಟಿ ವೇಳೆ ಮಂಗಳೂರು ಲೋಕಾಯುಕ್ತ ವಿಭಾಗದ ಎಸ್ಪಿ ನಟರಾಜ್ ಎಮ್.ಎ, ಇನ್ಸ್ಪೆಕ್ಟರ್ ಅಮಾನುಲ್ಲಾ, ಸುರೇಶ್ , ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಕುವೆಟ್ಟು ಗ್ರಾಮ ಪಂಚಾಯತ್ ಪಿಡಿಓ ಇಮ್ತಿಯಾಜ್ , ಕಂದಾಯ ನಿರೀಕ್ಷಕ ಪ್ರತೀಷ್, ಗ್ರಾಮ ಆಡಳಿತಾಧಿಕಾರಿ ಗೌತಮಿ ಹಾಗೂ ಮತ್ತಿತರರು ಅಧಿಕಾರಿಗಳು ಉಪಸ್ಥಿತರಿದ್ದರು.