ನಾಳ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿ ಸದಸ್ಯರು ಡಿ.26 ರಾತ್ರಿ ನಾಳ ದೇವಸ್ಥಾನದಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ.
ನಾಳ ಶ್ರೀ ದುರ್ಗಾಪರಮೇಶ್ವರಿ ಭಜನೆ ಮಂಡಳಿ 60 ಕ್ಕೂ ಹೆಚ್ಚಿನ ಸದಸ್ಯರು ಅಯೋಧ್ಯೆ ಶ್ರೀ ಬಲರಾಮ ಕ್ಷೇತ್ರಕ್ಕೆ ಭೇಟಿ ನೀಡಿ, ಭಜನೆ ಕಾರ್ಯಕ್ರಮ ನೆರವೇರಿಸುತ್ತಾರೆ. ಹಾಗೂ ಈ ಸಂದರ್ಭದಲ್ಲಿ ವಿವಿಧ ಪುಣ್ಯ ಕ್ಷೇತ್ರ ದೇವಾಲಯಗಳಿಗೆ ಭೇಟಿ ನೀಡುತ್ತಾರೆ.
ಈಗಾಗಲೇ ಮಂಡಳಿ ಹಲವಾರು ಪುಣ್ಯ ಕ್ಷೇತ್ರಗಳ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಯನ್ನು ಪಡೆದಿದ್ದಾರೆ. ಹಾಗೂ ಭಜನಾ ಕಮ್ಮಟಗಳಲ್ಲಿ ಭಾಗವಹಿಸಿದ್ದಾರೆ.