ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ

ಬೆಳಾಲು : ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಡಿ. 25 ರಂದು ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ ಜರುಗಿತು.

ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಉದಿತ್ ಕುಮಾರ್ ಜೈನ್ ವಹಿಸಿಕೊಂಡಿದ್ದರು. ಧಾರ್ಮಿಕ ಭಾಷಣಕಾರರಾಗಿ ಆಗಮಿಸಿದ ಕಿರಣ್ ಚಂದ್ರ ಡಿ. ಪುಷ್ಪಗಿರಿ ಧರ್ಮದ ಬಗ್ಗೆ ಭಾಷಣ ಮಾಡಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಲಕ್ಷಿ ಇಂಡಸ್ಟ್ರೀಸ್ ನ ಮಾಲಕರಾದ ಮೋಹನ್ ಕುಮಾರ್ ಸಮಾಯೋಚಿತವಾಗಿ ಮಾತನಾಡಿದರು, ಈ ಸಂದರ್ಭದಲ್ಲಿ ವೇದಿಕೆಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜೀವಂಧರ್ ಕುಮಾರ್ ಜೈನ್, ಆಸ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಶ್ರೀನಿವಾಸ್ ಗೌಡ, ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ಮಮತಾ ದಿನೇಶ್ ಪೂಜಾರಿ, ಅನಂತೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ನವೀನ್ ಗೌಡ ಕಂಬಳದಡ್ಡ ಉಪಸ್ಥಿತರಿದ್ದರು.

ವ್ಯವಸ್ಥಾಪನಾ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ದುರ್ಗಾಪ್ರಸಾದ್ ಕೇರ್ಮುನ್ನಾಯ ಸ್ವಾಗತಿಸಿ, ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಹೇಮಲತಾ ಶ್ರೀನಿವಾಸ್ ಗೌಡ ವಂದಿಸಿದರು. ಗಿರೀಶ್ ಕುಮಾರ್ ಎಂ ಮತ್ತು ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಬೆಳಾಲು ಶ್ರೀ ಧ. ಮಂ.ಅ. ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆಯಲ್ಲಿ ತ್ರಿಶೂಲ್ 1 ಗ್ರಾಂ ಗೋಲ್ಡ್ ಮತ್ತು ಫ್ಯಾನ್ಸಿ ಶುಭಾರಂಭ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಮಣ್ಯ ಶಬರಾಯ ಕೆ. ಆಯ್ಕೆ

Suddi Udaya
error: Content is protected !!