ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ (ನಿ) ಮಿತ್ತಬಾಗಿಲು ಇದರ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ 8 ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ನಿರ್ದೇಶಕರನ್ನು ಹಾರ ಹಾಕಿ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಚುನಾವಣಾ ಉಸ್ತುವಾರಿ ಆನಂದ ಅಡಿಲು, ಶ್ರೀನಿವಾಸ ಗೌಡ ನೆಲ್ಲಿಪಾಲ್, ಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ಸಚಿನ್ ಗೌಡ, ಮಧುಸೂದನ್ ಮಲ್ಲ, ಶ್ರೀಕಾಂತ್ ಎಸ್ ಇಂದಬೆಟ್ಟು, ಪ್ರಮುಖರಾದ ಕೃಷ್ಣಪ್ಪ ಪೂಜಾರಿ ಕಿಲ್ಲೂರು, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.