April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನ‘ಕೆರೆಗೆ’ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಡಿ.26ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆರೆಯ ಅವ್ಯವಸ್ಥೆ ಹಾಗೂ ಒತ್ತುವರಿಯ ಬಗ್ಗೆ ಲೋಕಾಯುಕ್ತಕ್ಕೆ ದೂರು ಬಂದಿದ್ದ ಹಿನ್ನಲೆ ಬಿ.ಎಸ್.ಪಾಟೀಲ್ ಅವರು ಕುವೆಟ್ಟು ಪಂಚಾಯತ್ ಅಧಿಕಾರಿಗಳು, ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ತಹಶೀಲ್ದಾರ್ ನೇತೃತ್ವದಲ್ಲಿ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದ್ದು.‌ಈ ವೇಳೆ ಕೆರೆಯ ಸುತ್ತಮುತ್ತಲಿನ ಪ್ರದೇಶದ ವಾತಾವರಣ ನೋಡಿ ಅಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದು. ಕೆರೆಯ ಸುತ್ತ ಕಾರಿಡಾರ್ ನಿರ್ಮಿಸಿ ಸರಿಯಾದ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು, ಅಲ್ಲದೆ ಕೆರೆಯ ಒತ್ತುವರಿಯ ಬಗ್ಗೆ ಹತ್ತು ದಿನದ ಒಳಗೆ ಸರ್ವೆ ನಡೆಸಿ ವರದಿ ನೀಡುವಂತೆ ಬೆಳ್ತಂಗಡಿ ತಹಶೀಲ್ದಾರರಿಗೆ ಸ್ಥಳದಲ್ಲಿಯೇ ಸೂಚಿಸಿದರು.

ಲೋಕಾಯುಕ್ತ ನ್ಯಾಯಮೂರ್ತಿ ಭೇಟಿ ವೇಳೆ ಮಂಗಳೂರು ಲೋಕಾಯುಕ್ತ ವಿಭಾಗದ ಎಸ್ಪಿ ನಟರಾಜ್ ಎಮ್.ಎ, ಇನ್ಸ್ಪೆಕ್ಟರ್ ಅಮಾನುಲ್ಲಾ, ಸುರೇಶ್ , ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಕುವೆಟ್ಟು ಗ್ರಾಮ ಪಂಚಾಯತ್ ಪಿಡಿಓ ಇಮ್ತಿಯಾಜ್ , ಕಂದಾಯ ನಿರೀಕ್ಷಕ ಪ್ರತೀಷ್, ಗ್ರಾಮ ಆಡಳಿತಾಧಿಕಾರಿ ಗೌತಮಿ ಹಾಗೂ ಮತ್ತಿತರರು ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದ ಗರ್ಡಾಡಿ, ಪಡಂಗಡಿ ಗ್ರಾಮಗಳ ಗ್ರಾಮ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಶಿರ್ಲಾಲು ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಪದಗ್ರಹಣ

Suddi Udaya
error: Content is protected !!