September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

ಬೆಳ್ತಂಗಡಿ.ಹಣಕಾಸು ಸಚಿವರಾಗಿ, ರಿಸರ್ವ್ ಬ್ಯಾಂಕ್ ಗೌವರ್ನರ್ ಆಗಿ, ಸತತ 10 ವರ್ಷಗಳ ಕಾಲ ಪ್ರಧಾನ ಮಂತ್ರಿಯಾಗಿ ತಮ್ಮ ಜ್ಞಾನ ಮತ್ತು ಬದ್ಧತೆ ಮೂಲಕ ದೇಶಕ್ಕೆ ಸೇವೆ ಸಲ್ಲಿಸಿದ ವಿಶ್ವ ಕಂಡಂತಹ ಶ್ರೇಷ್ಠ ಆರ್ಥಿಕ ತಜ್ಞರಾದ ಡಾ. ಮನಮೋಹನ್ ಸಿಂಗ್ ಅವರು ಅಗಲಿದ ಸುದ್ದಿ ತಿಳಿದು ಅತೀವ ದುಃಖವಾಯಿತು.

ಅವರು ಜಾರಿಗೆ ತಂದಂತಹ ಉದ್ಯೋಗ ಖಾತ್ರಿ ಮತ್ತು ಆಹಾರ ಭದ್ರತಾ ಕಾಯ್ದೆಯಂತಹ (Food Security Act), ಯೋಜನೆಗಳು ದೇಶದ ಕೋಟ್ಯಾಂತರ ಜನರ ಬಡತನವನ್ನು ನೀಗಿಸಿತು. RTE ಶಿಕ್ಷಣ ಹಕ್ಕು ಕಾಯ್ದೆ (Right to Education ) ಬಡ ಮಕ್ಕಳಿಗೂ ಪ್ರತಿಷ್ಠಿತ‌ ಶಾಲೆಗಳಲ್ಲಿ ಓದಲು ಅವಕಾಶ ಕಲ್ಪಿಸಿತು. RTI ಕ್ರಾಂತಿಕಾರಕವಾದ ಮಾಹಿತಿ ಹಕ್ಕು ಕಾನೂನು ಆಡಳಿತದಲ್ಲಿ ಪಾರದರ್ಶಕತೆಯನ್ನು ತಂದಿತು. ದೇಶಕ್ಕೆ ಕೊಡುಗೆಯಾಗಿರುವ ಅವರ ಸಾಧನೆಗಳು ಎಂದಿಗೂ ಅಜರಾಮರ.

ಮನಮೋಹನ್ ಸಿಂಗ್ ಅವರ ಆತ್ಮಕ್ಕೆ ಶಾಂತಿ ದೊರೆಯಲಿ, ಅವರ ಕುಟುಂಬವರ್ಗದವರಿಗೆ ಹಾಗೂ ಕೋಟ್ಯಂತರ ಅಭಿಮಾನಿ ಬಳಗದವರಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ ಸೂಚಿಸಿದ್ದಾರೆ.


Related posts

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾನ್ಯತೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya
error: Content is protected !!