25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಡಗಕಾರಂದೂರು ಸ.ಉ.ಪ್ರಾ.ಶಾಲಾ ಪ್ರತಿಭಾ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

ಬಡಗಕಾರಂದೂರು: ಇಲ್ಲಿಯ ಸ.ಉ.ಪ್ರಾ.ಶಾಲೆಯ ಪ್ರತಿಭಾ ದಿನಾಚರಣೆ-ಗುರುವಂದನಾ ಕಾರ್ಯಕ್ರಮವು ಇತ್ತೀಚೆಗೆ ಜರುಗಿತು.

ಕಾರ್ಯಕ್ರಮವನ್ನು ರಾಜ್ಯ ಪ್ರಶಸ್ತಿ ವಿಜೇತ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ನವೀಕೃತಗೊಂಡ ಶಾಲಾ ನಲಿ-ಕಲಿ ತರಗತಿಯನ್ನು ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಮೊಕ್ತೇಸರ ಹೆಚ್.ಎಲ್. ರಾವ್ ಉದ್ಘಾಟಿಸಿದರು

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸರಸ್ವತಿ, ಸಭಾಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಶಶಿಕಾಂತ್ ನಾಯಕ್, ಶಾಲಾ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸುಭಾಶ್ಚಂದ್ರ ರೈ ಪಡ್ಯೋಡಿಗುತ್ತು, ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಆಚಾರ್ಯ ಮಿತ್ತರೋಡಿ, ಕೃಷ್ಣಪ್ಪ ಪೂಜಾರಿ ಬಿಕ್ಕಿರ, ಶ್ರೀಮತಿ ಗೀತಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸಾದ್ ಪೂಜಾರಿ, ಶಾಲಾ ವಿದ್ಯಾರ್ಥಿ ನಾಯಕ ಕೌಶಿಕ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

ಅರುವ ಕೊರಗಪ್ಪ ಶೆಟ್ಟಿಯವರನ್ನು ಹಾಗೂ ಹೆಚ್.ಎಲ್. ರಾವ್ ರವರನ್ನು ಸನ್ಮಾನಿಸಲಾಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯ ಸಂದೀಪ್ ಎಸ್. ನೀರಲ್ಕೆ ಸನ್ಮಾನ ಪತ್ರ ವಾಚಿಸಿದರು.

ಬಡಗಕಾರಂದೂರು ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಹಾಗೂ ನಿವೃತ್ತರಾದ ಶಿಕ್ಷಕರನ್ನು ಗೌರವಪೂರ್ವಕವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು ಮತ್ತು ಪ್ರಸ್ತುತ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ, ಅಡುಗೆ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.

ಮುಖ್ಯೋಪಾಧ್ಯಾಯ ಸುರೇಶ್ ಎನ್. ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಮಂಗಳಾ ಕೆ ಕಾರ್ಯಕ್ರಮ ನಿರೂಪಿಸಿದರು. ಶಾಲಾ ವಿದ್ಯಾರ್ಥಿಗಳು, ಪೋಷಕರು, ಅಧ್ಯಾಪಕ ವೃಂದದವರು, ವಿಧ್ಯಾಭಿಮಾನಿಗಳು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

Suddi Udaya
error: Content is protected !!