ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಮೃತದೇಹವು ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ಡಿ.27ರಂದು ಪತ್ತೆಯಾಗಿದ್ದು, ವಾರೀಸುದಾರರ ಪತ್ತೆಗೆ ಬೆಳ್ತಂಗಡಿ ಪೊಲೀಸರು ಮನವಿ ಮಾಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ಸುಮಾರು ೫೫-೬೦ ವರ್ಷದ ಅಪರಿಚಿತ ವ್ಯಕ್ತಿಯು ಅನಾರೋಗ್ಯದಿಂದ ಮೃತಪಟ್ಟಿರುವ ಸ್ಥಿತಿಯಲ್ಲಿ ಡಿ.೨೭ರಂದು ಬೆಳಗ್ಗೆ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿಯ ಮೃತದೇಹ ಮಂಗಳೂರು ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಶವಪರೀಕ್ಷೆಗೆ ಸಾಗಿಸಿದ್ದು. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವ್ಯಕ್ತಿ ವಾರಿಸುದಾರರ ಪತ್ತೆಗೆ ಮನವಿ ಮಾಡಿದ್ದಾರೆ.