33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

ಧರ್ಮಸ್ಥಳ: ಗ್ರಾಮ ಪಂಚಾಯತ್ ಧರ್ಮಸ್ಥಳ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಪುತ್ತೂರು ಇದರ ಸಹಯೋಗದಲ್ಲಿ ಉಚಿತ ಫೂಟ್ ಫಲ್ ಥೆರಪಿ ಶಿಬಿರವು ಡಿ.15ರಿಂದ 30ರವರೆಗೆ ನಡೆಯಲಿದ್ದು, ಡಿ.27ರಂದು ಮಾಹಿತಿ ಕಾರ್ಯಾಗಾರವು ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಟಲ್ ಜೀ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮನೋಹರ್ ರಾವ್ ಕನ್ಯಾಡಿ, ನಾರಾಯಣ ಧರ್ಮಸ್ಥಳ, ವಿಠಲ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್ ವಹಿಸಿದ್ದರು.

ಶಿಬಿರಾರ್ಥಿಗಳಿಗೆ ಸೀತಾರಾಮ್ ಶೆಟ್ಟಿ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಿದರು.
ವೇದಿಕೆಯಲ್ಲಿ ಧರ್ಮಸ್ಥಳ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್, ಕಾರ್ಯನಿರ್ವಹಣಾಧಿಕಾರಿ ಶಶಿಧರ್, ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿಮಲ, ಪಂ. ಅ. ಅಧಿಕಾರಿ ದಿನೇಶ್, ಪುತ್ತೂರು ಕಂಪಾನಿಯೋ ಪ್ರವರ್ತಕ ಸೀತಾರಾಮ್ ಶೆಟ್ಟಿ, ಮನೋಹರ್ ರಾವ್ ಕನ್ಯಾಡಿ, ವಿಠಲ ಶೆಟ್ಟಿ, ನಾರಾಯಣ ಧರ್ಮಸ್ಥಳ ಉಪಸ್ಥಿತರಿದ್ದರು.
ಶಿಬಿರಾಥಿಗಳು ಅನಿಸಿಕೆ ವ್ಯಕ್ತಪಡಿಸಿದರು. ಕಂಪನಿಯ ಪ್ರಭಾಕರ್ ಕಾರ್ಯಕ್ರಮ ನಿರೂಪಿಸಿದರು. ನೀಲಕಂಠ ಶೆಟ್ಟಿ ಸ್ವಾಗತಿಸಿ ವಂದಿಸಿದರು.

Related posts

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya

ಉಜಿರೆ : ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!