ಮಂಗಳೂರು: ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ಡಿ.25ರಂದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಕುಂದಾಪುರದ ಬೀಜಾಡಿಯ ಯೋಧ ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿ (31ವ) ರವರ ಪಾರ್ಥಿವ ಶರೀರ ಡಿ.26ರಂದು ತಡರಾತ್ರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಸೇನಾ ವಿಮಾನದಲ್ಲಿ ಆಗಮಿಸಿತು.

ಪಾರ್ಥಿವ ಶರೀರವನ್ನು ವಿಮಾನ ನಿಲ್ದಾಣದಲ್ಲಿ ಸಕಲ ಸರಕಾರಿ, ಸೇನಾ ಗೌರವದೊಂದಿಗೆ ಸ್ವೀಕರಿಸಲಾಯಿತು. ದಕ್ಷಿಣ ಕನ್ನಡ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ವಿಮಾನದಿಂದ ಶರೀರವನ್ನು ಹೊರಗೆ ತೆಗೆಯುವ ವೇಳೆ ಶವ ಪಟ್ಟಿಗೆಗೆ ಹೆಗಲು ನೀಡಿದರು. ಮಾಜಿ ‘ಯೋಧರಾಗಿರುವ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಸಿ.ಎಲ್. ಜತೆಗೂಡಿದರು. ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಜತೆಗಿದ್ದರು. ಬಳಿಕ ಅಂತಿಮ ನಮನ ಸಲ್ಲಿಸಿ, ಉಡುಪಿಗೆ ಬೀಳ್ಕೊಡಲಾಯಿತು.
