25 C
ಪುತ್ತೂರು, ಬೆಳ್ತಂಗಡಿ
January 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

ಓಡಿಲ್ನಾಳ: ಶ್ರೀರಾಮ ನಗರ ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಡಿ.28 ರಿಂದ ಜ.1 ರವರೆಗೆ ಕ್ಷೇತ್ರದ ತಂತ್ರಿಗಳಾದ ವೇ.ಮೂ. ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.


ಇಂದು ಬೆಳಿಗ್ಗೆ ಊರವರಿಂದ ಹೊರೆಕಾಣಿಕೆ ಸಮರ್ಪಿಸಲಾಯಿತು, ನಂತರ ತಂತ್ರಿಗಳ ಆಗಮನ, ಮಧ್ಯಾಹ್ನ ತೋರಣ ಮುಹೂರ್ತ, ಧ್ವಜಾರೋಹಣ, ಮಹಾಪೂಜೆ ನಡೆಯಿತು. ರಾತ್ರಿ ಪೂಜಾ ಉತ್ಸವ ನಡೆಯಲಿದೆ.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್‍ಯಾರು, ಪ್ರಧಾನ ಅರ್ಚಕ ಪ್ರಸನ್ನ ಭಟ್, ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು, ಮಹಿಳಾ ಸಮಿತಿ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ, ಯುವ ಸಮಿತಿ ಅಧ್ಯಕ್ಷ ನಿತೇಶ ಕೆ. ಓಡಿಲ್ನಾಳ, ಹಾಗೂ ಟ್ರಸ್ಟಿಗಳು, ಯುವ ಸಮಿತಿ, ಭಜನಾ ಸಮಿತಿ, ಮಹಿಳಾ ಸಮಿತಿಯ ಸದಸ್ಯರು ಮತ್ತು ಊರವರು ಉಪಸ್ಥಿತರಿದ್ದರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

Suddi Udaya

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

Suddi Udaya
error: Content is protected !!