33.6 C
ಪುತ್ತೂರು, ಬೆಳ್ತಂಗಡಿ
January 6, 2025
ಸಂಘ-ಸಂಸ್ಥೆಗಳು

ದ.ಕ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಅಧ್ಯಕ್ಷರಾಗಿ ದಯಾನಂದ ನಾಯಕ್ ಪುಂಜಾಲಕಟ್ಟೆ -,ಕಾಯ೯ದಶಿ೯ಯಾಗಿ ಸುಧಾಕರ್ ಪ್ರಭು

ಬೆಳ್ತಂಗಡಿ: ಸ್ವಾತಂತ್ರ್ಯ ಪೂರ್ವದಲ್ಲಿ ಪ್ರಾರಂಭಗೊಂಡು, 1961 ರಲ್ಲಿ ನೋಂದಾವಣೆಗೊಂಡ ಹಿರಿಯ ಪ್ರತಿಷ್ಠಿತ ಸಮಾಜ ಸೇವಾ ಸಂಘಟನೆಯಾದ ದಕ್ಷಿಣ ಕನ್ನಡ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ (ರಿ).ದ ಸಭೆಯು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸಭಾಭವನ ಬಂಟಾಳದಲ್ಲಿ ಜರಗಿತು.

ದಯಾನಂದ ನಾಯಕ್

ಸುಧಾಕರ್ ಪ್ರಭು

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಕೂಡಿಬೈಲು ಶ್ರೀನಿವಾಸ ಶೆಣೈಯವರು ವಹಿಸಿದ್ದರು. ಜಿಲ್ಲಾ ಸಂಘದ ನೂತನ ಅಧ್ಯಕ್ಷರಾಗಿ ಮುಂದಿನ ಅವಧಿಗೆ ದಯಾನಂದ ನಾಯಕ್, ಪುಂಜಾಲಕಟ್ಟೆ , ಬೆಳ್ತಂಗಡಿ ಇವರು ಸರ್ವಾನುಮತದಿಂದ ಆಯ್ಕೆಯಾದರು. ಇವರು ಅನೇಕ ವರ್ಷಗಳಿಂದ ಧಾರ್ಮಿಕ, ಸಾಮಾಜಿಕ , ಶೈಕ್ಷಣಿಕ, ಆರೋಗ್ಯ ಮುಂತಾದ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ಬೆಳ್ತಂಗಡಿ ತಾಲೂಕು ಸಂಘದ ಹಾಗೂ ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಎಲ್ಲಾ ಸಂಘಟನೆಗಳನ್ನು ಒಟ್ಟುಗೂಡಿಸಿಕೊಂಡು ಸಮಾಜದ ಅಭಿವೃದ್ಧಿಯ ಪಥದ ರೂವಾರಿಯಾಗಿದ್ದಾರೆ. ಮಾತ್ರವಲ್ಲ ಜಿಲ್ಲಾ ಸಂಘದ ಸದಸ್ಯರಾಗಿ ಪದಾಧಿಕಾರಿಗಳಾಗಿ ಹಾಗೂ ಕಾರ್ಯದರ್ಶಿಗಳಾಗಿ ಹಲವಾರು ವರ್ಷ ಸೇವೆ ಸಲ್ಲಿಸಿರುತ್ತಾರೆ. ಅವರು ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನದಲ್ಲೂ ಸದಸ್ಯರಾಗಿದ್ದು ಪದಾಧಿಕಾರಿಯಾಗಿ ಅತ್ಯುತ್ತಮ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದಾರೆ. ಸಾರ್ವಜನಿಕ ಕ್ಷೇತ್ರದಲ್ಲಿ ಹಲವಾರು ಸಂಘಟನೆಗಳಲ್ಲಿ ಸೇವೆ ಸಲ್ಲಿಸುತ್ತಾ ಅಂತಾರಾಷ್ಟ್ರೀಯ ಸಂಸ್ಥೆ ಬೆಳ್ತಂಗಡಿ ಜೂನಿಯರ್ ಚೇಂಬರ್ ನ ಕಾರ್ಯದರ್ಶಿ, ಪದಾಧಿಕಾರಿಯಾಗಿ, ಬೆಳ್ಳಿ ಹಬ್ಬದ ವರ್ಷದ ಅಧ್ಯಕ್ಷರಾಗಿ, ವಲಯ ನಿರ್ದೇಶಕರಾಗಿ, ವಲಯ ಉಪಾಧ್ಯಕ್ಷರಾಗಿ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿಯ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ, ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ ಹಲವಾರು ಸಂಘಟನೆಗಳಲ್ಲೂ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ನಮ್ಮ ಸಮಾಜದ ಎಲ್ಲ ಸೇವಾ ಕಾರ್ಯಗಳಲ್ಲೂ ಉತ್ತಮ ಸಂಘಟಕರಾಗಿ ಸೇವೆ ಸಲ್ಲಿಸಿದ ಅನುಭವ ಇವರಿಗಿದೆ. ಉತ್ತಮ ವಾಗ್ಮಿಯು, ಒಳ್ಳೆಯ ಸಂಘಟಕರು ಆಗಿ ಸಮಾಜದಲ್ಲಿ ಜನಾನುರಾಗಿಯಾದ್ದಾರೆ. ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಅವರು ತನ್ನ ಅಭಿಪ್ರಾಯಗಳನ್ನು ಹಂಚಿಕೊಂಡು ಸಂಘಟನೆಯನ್ನು ಬಲಪಡಿಸಿ ಸಮಾಜವನ್ನು ಅಭಿವೃದ್ಧಿಗೊಳಿಸಲು ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಹಿರಿಯರ ಅಭಿಪ್ರಾಯಗಳನ್ನು ಪಡೆದು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಕಂಕಣಬದ್ಧರಾಗಿ ತಮ್ಮ ಸೇವೆಯನ್ನು ಸಲ್ಲಿಸಲು ಶಕ್ತಿ ಮೀರಿ ದುಡಿಯಬೇಕಾಗಿದೆ ಹಾಗೂ ನೂತನ ಆಡಳಿತ ಮಂಡಳಿಗೆ ಸರ್ವ ಸಹಕಾರವನ್ನು ನೀಡಬೇಕೆಂದು ವಿನಂತಿಸಿದರು. ಶ್ರೀ ಪೂರ್ಣನಂದ ಸೌಹಾರ್ದ ಸಹಕಾರಿ ಯಲ್ಲಿ ಕಳೆದ 18 ವರ್ಷಗಳಿಂದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಸುಧಾಕರ್ ಪ್ರಭು ಪೆರ್ಮರೋಡಿ ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದು, ಎಲ್ಲರ ಸಹಕಾರವನ್ನು ಕೋರುತ್ತಾ ಕೃತಜ್ಞತೆಯನ್ನು ಸಲ್ಲಿಸಿದರು. ಶ್ರೀನಿವಾಸ ಶೆಣೈ ಕೂಡಿಬೈಲು ಅವರು ತನ್ನ ಸೇವಾ ಅವಧಿಯಲ್ಲಿ ದುಡಿದ ಹಾಗೂ ಸಹಕಾರ ನೀಡಿದ ಎಲ್ಲರನ್ನು ಸ್ಮರಿಸಿ ಅಭಿನಂದಿಸಿ ಕೃತಜ್ಞತೆಗಳನ್ನು ಸಲ್ಲಿಸಿದರು ಹಾಗೂ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಕಾರ್ಯದರ್ಶಿಗಳು ಹಾಗೂ ಆಡಳಿತ ಮಂಡಳಿಯವರನ್ನು ಅಭಿನಂದಿಸಿ ಸಂಘದ ಎಲ್ಲ ಕಾರ್ಯ ಚಟುವಟಿಕೆಗಳಿಗೆ ಸಂಪೂರ್ಣ ಸಹಕಾರವನ್ನು ನೀಡುತ್ತೇನೆ ಎಂದು ಭರವಸೆಯ ಮಾತುಗಳನ್ನು ನುಡಿದರು. ಈ ಸಂದರ್ಭದಲ್ಲಿ ಸಮಾಜದ ಗಣ್ಯರು, ಹಿರಿಯರು ಹಾಗೂ ಸಂಘಟನೆಯ ಸದಸ್ಯರು ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya
error: Content is protected !!