23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ ಮತ್ತು ಪೋಷಕರು ಇವರ ಸಹಭಾಗಿತ್ವದಲ್ಲಿ ” ಕಣ್ಣಿನ ಉಚಿತ ತಪಾಸಣಾ ಶಿಬಿರವು 2.5 NVG Eye Mithra ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ ನಡೆಯಿತು.

ರಾಮಚಂದ್ರ ರವರು ಕಣ್ಣಿನ ದೋಷ, ಯಾವ ರೀತಿಯಾದ ಆಹಾರ ಸೇವನೆ ಕಣ್ಣಿಗೆ ಉತ್ತಮ , ಅತಿಯಾದ ಮೊಬೈಲ್ ಬಳಕೆಯಿಂದ ಕಣ್ಣಿನ ಮೇಲಾಗುವ ದುಷ್ಪರಿಣಾಮ ಮತ್ತು ನೇತ್ರದಾನದ ಬಗ್ಗೆ ಅರಿವನ್ನು ಮೂಡಿಸಿದರು.

ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಪೋಷಕರು ಮತ್ತು ಗ್ರಾಮಸ್ಥರು ಕಣ್ಣಿನ ತಪಾಸಣೆಯ ಪ್ರಯೋಜನವನ್ನು ಪಡೆದುಕೊಂಡರು.

ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ನಂದ ಕೆ, ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್, ಶಾಲಾ ಶಿಕ್ಷಕ ವೃಂದದವರು, ಪೋಷಕರು, ಗ್ರಾಮಸ್ಥರು ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya

ಕೊಕ್ಕಡ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಿವರಾಮ ಗೌಡ ಟಿ. ಎಂ. ನಿಧನ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಹಕ ಕುಶಾಲಪ್ಪ ರೈ ರವರಿಗೆ ಗೌರವಾರ್ಪಣೆ

Suddi Udaya

ಸೆ. 9: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಿಂದ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ಗೇರುಕಟ್ಟೆ: ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಸಂತಾಪ ಪೂರ್ವಭಾವಿ ಸಭೆ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!