23.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಂಘ-ಸಂಸ್ಥೆಗಳು

ದ.ಕ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಅಧ್ಯಕ್ಷರಾಗಿ ದಯಾನಂದ ನಾಯಕ್ ಪುಂಜಾಲಕಟ್ಟೆ -,ಕಾಯ೯ದಶಿ೯ಯಾಗಿ ಸುಧಾಕರ್ ಪ್ರಭು

ಬೆಳ್ತಂಗಡಿ: ಸ್ವಾತಂತ್ರ್ಯ ಪೂರ್ವದಲ್ಲಿ ಪ್ರಾರಂಭಗೊಂಡು, 1961 ರಲ್ಲಿ ನೋಂದಾವಣೆಗೊಂಡ ಹಿರಿಯ ಪ್ರತಿಷ್ಠಿತ ಸಮಾಜ ಸೇವಾ ಸಂಘಟನೆಯಾದ ದಕ್ಷಿಣ ಕನ್ನಡ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ (ರಿ).ದ ಸಭೆಯು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸಭಾಭವನ ಬಂಟಾಳದಲ್ಲಿ ಜರಗಿತು.

ದಯಾನಂದ ನಾಯಕ್

ಸುಧಾಕರ್ ಪ್ರಭು

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಕೂಡಿಬೈಲು ಶ್ರೀನಿವಾಸ ಶೆಣೈಯವರು ವಹಿಸಿದ್ದರು. ಜಿಲ್ಲಾ ಸಂಘದ ನೂತನ ಅಧ್ಯಕ್ಷರಾಗಿ ಮುಂದಿನ ಅವಧಿಗೆ ದಯಾನಂದ ನಾಯಕ್, ಪುಂಜಾಲಕಟ್ಟೆ , ಬೆಳ್ತಂಗಡಿ ಇವರು ಸರ್ವಾನುಮತದಿಂದ ಆಯ್ಕೆಯಾದರು. ಇವರು ಅನೇಕ ವರ್ಷಗಳಿಂದ ಧಾರ್ಮಿಕ, ಸಾಮಾಜಿಕ , ಶೈಕ್ಷಣಿಕ, ಆರೋಗ್ಯ ಮುಂತಾದ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ಬೆಳ್ತಂಗಡಿ ತಾಲೂಕು ಸಂಘದ ಹಾಗೂ ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಎಲ್ಲಾ ಸಂಘಟನೆಗಳನ್ನು ಒಟ್ಟುಗೂಡಿಸಿಕೊಂಡು ಸಮಾಜದ ಅಭಿವೃದ್ಧಿಯ ಪಥದ ರೂವಾರಿಯಾಗಿದ್ದಾರೆ. ಮಾತ್ರವಲ್ಲ ಜಿಲ್ಲಾ ಸಂಘದ ಸದಸ್ಯರಾಗಿ ಪದಾಧಿಕಾರಿಗಳಾಗಿ ಹಾಗೂ ಕಾರ್ಯದರ್ಶಿಗಳಾಗಿ ಹಲವಾರು ವರ್ಷ ಸೇವೆ ಸಲ್ಲಿಸಿರುತ್ತಾರೆ. ಅವರು ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನದಲ್ಲೂ ಸದಸ್ಯರಾಗಿದ್ದು ಪದಾಧಿಕಾರಿಯಾಗಿ ಅತ್ಯುತ್ತಮ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದಾರೆ. ಸಾರ್ವಜನಿಕ ಕ್ಷೇತ್ರದಲ್ಲಿ ಹಲವಾರು ಸಂಘಟನೆಗಳಲ್ಲಿ ಸೇವೆ ಸಲ್ಲಿಸುತ್ತಾ ಅಂತಾರಾಷ್ಟ್ರೀಯ ಸಂಸ್ಥೆ ಬೆಳ್ತಂಗಡಿ ಜೂನಿಯರ್ ಚೇಂಬರ್ ನ ಕಾರ್ಯದರ್ಶಿ, ಪದಾಧಿಕಾರಿಯಾಗಿ, ಬೆಳ್ಳಿ ಹಬ್ಬದ ವರ್ಷದ ಅಧ್ಯಕ್ಷರಾಗಿ, ವಲಯ ನಿರ್ದೇಶಕರಾಗಿ, ವಲಯ ಉಪಾಧ್ಯಕ್ಷರಾಗಿ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿಯ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ, ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ ಹಲವಾರು ಸಂಘಟನೆಗಳಲ್ಲೂ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ನಮ್ಮ ಸಮಾಜದ ಎಲ್ಲ ಸೇವಾ ಕಾರ್ಯಗಳಲ್ಲೂ ಉತ್ತಮ ಸಂಘಟಕರಾಗಿ ಸೇವೆ ಸಲ್ಲಿಸಿದ ಅನುಭವ ಇವರಿಗಿದೆ. ಉತ್ತಮ ವಾಗ್ಮಿಯು, ಒಳ್ಳೆಯ ಸಂಘಟಕರು ಆಗಿ ಸಮಾಜದಲ್ಲಿ ಜನಾನುರಾಗಿಯಾದ್ದಾರೆ. ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಅವರು ತನ್ನ ಅಭಿಪ್ರಾಯಗಳನ್ನು ಹಂಚಿಕೊಂಡು ಸಂಘಟನೆಯನ್ನು ಬಲಪಡಿಸಿ ಸಮಾಜವನ್ನು ಅಭಿವೃದ್ಧಿಗೊಳಿಸಲು ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಹಿರಿಯರ ಅಭಿಪ್ರಾಯಗಳನ್ನು ಪಡೆದು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಕಂಕಣಬದ್ಧರಾಗಿ ತಮ್ಮ ಸೇವೆಯನ್ನು ಸಲ್ಲಿಸಲು ಶಕ್ತಿ ಮೀರಿ ದುಡಿಯಬೇಕಾಗಿದೆ ಹಾಗೂ ನೂತನ ಆಡಳಿತ ಮಂಡಳಿಗೆ ಸರ್ವ ಸಹಕಾರವನ್ನು ನೀಡಬೇಕೆಂದು ವಿನಂತಿಸಿದರು. ಶ್ರೀ ಪೂರ್ಣನಂದ ಸೌಹಾರ್ದ ಸಹಕಾರಿ ಯಲ್ಲಿ ಕಳೆದ 18 ವರ್ಷಗಳಿಂದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಸುಧಾಕರ್ ಪ್ರಭು ಪೆರ್ಮರೋಡಿ ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದು, ಎಲ್ಲರ ಸಹಕಾರವನ್ನು ಕೋರುತ್ತಾ ಕೃತಜ್ಞತೆಯನ್ನು ಸಲ್ಲಿಸಿದರು. ಶ್ರೀನಿವಾಸ ಶೆಣೈ ಕೂಡಿಬೈಲು ಅವರು ತನ್ನ ಸೇವಾ ಅವಧಿಯಲ್ಲಿ ದುಡಿದ ಹಾಗೂ ಸಹಕಾರ ನೀಡಿದ ಎಲ್ಲರನ್ನು ಸ್ಮರಿಸಿ ಅಭಿನಂದಿಸಿ ಕೃತಜ್ಞತೆಗಳನ್ನು ಸಲ್ಲಿಸಿದರು ಹಾಗೂ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಕಾರ್ಯದರ್ಶಿಗಳು ಹಾಗೂ ಆಡಳಿತ ಮಂಡಳಿಯವರನ್ನು ಅಭಿನಂದಿಸಿ ಸಂಘದ ಎಲ್ಲ ಕಾರ್ಯ ಚಟುವಟಿಕೆಗಳಿಗೆ ಸಂಪೂರ್ಣ ಸಹಕಾರವನ್ನು ನೀಡುತ್ತೇನೆ ಎಂದು ಭರವಸೆಯ ಮಾತುಗಳನ್ನು ನುಡಿದರು. ಈ ಸಂದರ್ಭದಲ್ಲಿ ಸಮಾಜದ ಗಣ್ಯರು, ಹಿರಿಯರು ಹಾಗೂ ಸಂಘಟನೆಯ ಸದಸ್ಯರು ಪಾಲ್ಗೊಂಡಿದ್ದರು.

Related posts

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ: ಸಮಾರೋಪ ಸಮಾರಂಭ:ಜೋಡು ಜೀಟಿಗೆ ತುಳು ನಾಟಕ ಪ್ರದರ್ಶನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya
error: Content is protected !!