ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಕನ್ನಡ ವಿಭಾಗ ಹಾಗೂ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ (ರಿ.), ಕುಪ್ಪಳಿ ಸಹಯೋಗದಲ್ಲಿ ಕುವೆಂಪು ಅವರ 120ನೇ ಜನ್ಮದಿನೋತ್ಸವ ಪ್ರಯುಕ್ತ ವಿಶ್ವ ಮಾನವ ದಿನಾಚರಣೆಯನ್ನು ಡಿ.30ರಂದು ಉಜಿರೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.
ಪ್ರಸಿದ್ಧ ಬರಹಗಾರರು ಹಾಗೂ ಸಿನಿಮಾ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ರವರು ಪ್ರಧಾನ ಉಪನ್ಯಾಸವನ್ನು ನೆರವೇರಿಸಿ ಮಾತನಾಡಿ, ಕವಿಗೆ ಪ್ರತಿಯೊಂದು ಸೂರ್ಯೋಧಯವು ಕೂಡ ಹೊಸತ್ತಾಗಿರುತ್ತದೆ. ಸಾಮಾಜಿಕ ಜಾಲತಾಣಗಳನ್ನು ಸಾಂಸ್ಕೃತಿಕ ಜಾಲತಾಣವನ್ನಾಗಿ ಪರಿವರ್ತಿಸಬೇಕು. ಇಂದಿನ ಕಾಲಘಟ್ಟದಲ್ಲಿ ಪ್ರತಿಯೊಬ್ಬರೂ ಕೂಡ ಕುವೆಂಪು ರವರ ಕೃತಿಗಳನ್ನು ಓದುವುದು ಅವಶ್ಯ. ಹಾಗೂ ಓದುವುದರಿಂದ ಕಲ್ಪನಾ ಶಕ್ತಿ ಹೆಚ್ಚುತ್ತದೆ ಎಂದರು.
ಕಾಲೇಜು ಪ್ರಾಂಶುಪಾಲ ಡಾ. ಬಿ.ಎ. ಕುಮಾರ್ ಹೆಗ್ಡೆ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಪ್ರಧಾನ ಕಾರ್ಯಕ್ರಮದ ಬಳಿಕ ವಿಶೇಷ ಕಾರ್ಯಕ್ರಮವಾಗಿ ರಂಗ ನಿರ್ದೇಶಕ ಯಶವಂತ ಬೆಳ್ತಂಗಡಿ ನಿರ್ದೇಶಿಸಿರುವ ಎಸ್.ಡಿ.ಎಂ. ಕಲಾಕೇಂದ್ರದ ವಿದ್ಯಾರ್ಥಿಗಳಿಂದ ನಾಗಿ ಕಥನ ಕವನ ರೂಪಕ ಹಾಗೂ ಅರಿವಿನ ಹಾಡುಗಾರ ನಾದ ಮಣಿನಾಲ್ಕೂರು ರವರಿಂದ ಕುವೆಂಪು ಹಾಡುಗಳ ಗಾಯನ ನಡೆಯಿತು.
ಈ ಸಂದರ್ಭದಲ್ಲಿ ಡಾ|| ಶ್ರೀಮತಿ ಹೇಮಾವತಿ ವೀ. ಹೆಗ್ಗಡೆ, ಶ್ರೀಮತಿ ಸೋನಿಯಾ ವರ್ಮಾ, ಉಪ ಪ್ರಾಂಶುಪಾಲ ಎಸ್.ಎನ್ ಕಾಕತ್ಕರ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಂ.ಪಿ ಶ್ರೀನಾಥ್, ಸಂಸ್ಕೃತ ವಿಭಾಗದ ಮುಖ್ಯಸ್ಥ ಶ್ರೀಧರ್ ಭಟ್, ಉಪನ್ಯಾಸಕಿ ಡಾ. ಶಲೀಫ್, ಸ್ನಾತಕೋತ್ತರ ಪದವಿ ಸಹಾಯಕ ಪ್ರಾಧ್ಯಾಪಕ ಪದ್ಮನಾಭ ಉಪಸ್ಥಿತರಿದ್ದರು.
ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಬೋಜಮ್ಮ ಕೆ.ಎನ್ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ನಾಗಣ್ಣ ಡಿ.ಎ ನಿರೂಪಿಸಿದರು. ಕನ್ನಡ ಸಹ ಪ್ರಾಧ್ಯಾಪಕ ಡಾ. ರಾಜಶೇಖರ್ ಧನ್ಯವಾದವಿತ್ತರು.