33.6 C
ಪುತ್ತೂರು, ಬೆಳ್ತಂಗಡಿ
January 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ಇವರು ಬರೆದ ‘ ಅಮ್ಮ ಹೇಳಿದ ಕತೆಗಳು’ ಕಥಾಸಂಕಲನದ  ಬಿಡುಗಡೆಯನ್ನು  ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಡಿ.29ರಂದು ನೆರವೇರಿಸಿದರು.

ಈ ಸಂದರ್ಭದಲ್ಲಿ ಕೃತಿಕರ್ತ ಡಾ.ಸುಬ್ರಹ್ಮಣ್ಯ ಭಟ್, ಅವರ ಪತ್ನಿ ಭವ್ಯ ಜಿ.ಜಿ. ಹಾಗೂ ಮಕ್ಕಳಾದ ಅಭಿಗಮ್ಯ ರಾಮ್ ಮತ್ತು ಆಶ್ಮನ್ ಕೃಷ್ಣ ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ ಭಟ್ಟರ ಎರಡನೇ ಕಥಾ ಸಂಕಲನ ಇದಾಗಿದ್ದು ಸುಧಾ ವಾರಪತ್ರಿಕೆಯ ಮುಖ್ಯ ಉಪಸಂಪಾದಕಿ ಉಮಾ ಅನಂತ್ ಅವರು ಇದಕ್ಕೆ ಮುನ್ನುಡಿ ಬರೆದಿದ್ದು, ಖ್ಯಾತ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿಯವರು ಶುಭನುಡಿಗಳನ್ನು ಬರೆದಿರುತ್ತಾರೆ. ಮಲೆನಾಡು ಪ್ರಕಾಶನ ಚಿಕ್ಕಮಗಳೂರು ಇದನ್ನು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು 9448951856 ರಲ್ಲಿ ವಾಟ್ಸಪ್ ಮೂಲಕ ಸಂಪರ್ಕಿಸಬಹುದಾಗಿದೆ.

Related posts

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya

ಸುದೆಮುಗೇರು ವೃದ್ಧಾಶ್ರಮದಲ್ಲಿ. ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯರಿಗೆ ಬೀಳ್ಕೊಡುಗೆ

Suddi Udaya

ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ

Suddi Udaya
error: Content is protected !!