ಬೆಳ್ತಂಗಡಿ: ಕ್ರೀಡೆ ಸಮಾಜದಲ್ಲಿ ಸಾಮರಸ್ಯ ಭಾವನೆಯನ್ನು ಮೂಡಿಸುತ್ತದೆ ಮತ್ತು ಪರಸ್ಪರ ತಿಳುವಳಿಕೆಯನ್ನು ಹೆಚ್ಚು ಮಾಡುತ್ತದೆ ಎಂದು ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡೋತ್ಸವವನ್ನು ಉದ್ಘಾಟಿಸಿ
ಸುಬ್ರಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯದ ನಿವೃತ್ತ ಪ್ರಾಂಶುಪಾಲ ಮೋಹನ ರಾವ್ ಮಾತಾಡಿದರು. ಎಲ್ಲಾ ವಯೋಮಾನದವರಿಗೂ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಅವಕಾಶವನ್ನು ಕಲ್ಪಿಸಿದ ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯನ್ನು ಅಭಿನಂದಿಸಿದರು.
ಅಂಗಸಂಸ್ಥೆಯು ಹೊರತರುವ ವಾರ್ಷಿಕ ಕ್ಯಾಲೆಂಡರ್ ನ್ನು ಮಾಜಿ ಅಧ್ಯಕ್ಷ ವಿಷ್ಣುಮೂರ್ತಿ ಹೊಳ್ಳ ನಾಡ್ಜ ಬಿಡುಗಡೆಗೊಳಿಸಿದರು.
ಅಂಗ ಸಂಸ್ಥೆಯ ಅಧ್ಯಕ್ಷವಿಶ್ವನಾಥ ಹೊಳ್ಳ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಯಕ್ರಮದಲ್ಲಿ ನಿಕಿಟಪೂರ್ವ ಅಧ್ಯಕ್ಷ ವಾಸುದೇವ ಸೋಮಯಾಜಿ, ಮಹಿಳಾ ವೇದಿಕೆ ಅಧ್ಯಕ್ಷರಾದ ನಳಿನಿ ಹೊಳ್ಳ ಮತ್ತು ಕಾರ್ಯದರ್ಶಿ ಅಕ್ಷತಾ ಆಡೂರ್, ಅಂಗ ಸಂಸ್ಥೆಯ ಕೋಶಾಧಿಕಾರಿ ಪ್ರಕಾಶ್ ನಾರಾಯಣ ಉಪಸ್ಥಿತರಿದ್ದರು.
ಕಾರ್ಯದರ್ಶಿ ವಿಷ್ಣು ಪ್ರಕಾಶ್ ಎಂ ಕಾರ್ಯಕ್ರಮ ನಿರ್ವಹಿಸಿದರು.