ಬೆಳ್ತಂಗಡಿ: ಹಿರಿಯ ಪ್ರತಿಷ್ಠಿತ ಸಮಾಜ ಸೇವಾ ಸಂಘಟನೆಯಾದ ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆಯು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸಭಾಭವನ ಬಂಟ್ವಾಳದಲ್ಲಿ ಜರಗಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೊಡಿಬೈಲು ಶ್ರೀನಿವಾಸ ಶೆಣೈ ವಹಿಸಿದ್ದರು.
ಜಿಲ್ಲಾ ಸಂಘದ ನೂತನ ಅಧ್ಯಕ್ಷರಾಗಿ ದಯಾನಂದ ನಾಯಕ್ ಪುಂಜಾಲಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾಗಿ ಸುಧಾಕರ್ ಪ್ರಭು ಪೆರ್ಮರೋಡಿ ಇವರು ಆಯ್ಕೆಯಾದರು.
ಶ್ರೀನಿವಾಸ ಶೆಣೈ ಕೂಡಿಬೈಲು ಅವರು ತನ್ನ ಸೇವಾ ಅವಧಿಯಲ್ಲಿ ದುಡಿದ ಹಾಗೂ ಸಹಕಾರ ನೀಡಿದ ಎಲ್ಲರನ್ನು ಸ್ಮರಿಸಿ ಅಭಿನಂದಿಸಿ ಕೃತಜ್ಞತೆಗಳನ್ನು ಸಲ್ಲಿಸಿದರು ಹಾಗೂ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಕಾರ್ಯದರ್ಶಿಗಳು ಹಾಗೂ ಆಡಳಿತ ಮಂಡಳಿಯವರನ್ನು ಅಭಿನಂದಿಸಿ ಸಂಘದ ಎಲ್ಲ ಕಾರ್ಯ ಚಟುವಟಿಕೆಗಳಿಗೆ ಸಂಪೂರ್ಣ ಸಹಕಾರವನ್ನು ನೀಡುತ್ತೇನೆ ಎಂದು ಭರವಸೆಯ ಮಾತುಗಳನ್ನು ನುಡಿದರು.
ಈ ಸಂದರ್ಭದಲ್ಲಿ ಸಮಾಜದ ಗಣ್ಯರು, ಹಿರಿಯರು ಹಾಗೂ ಸಂಘಟನೆಯ ಸದಸ್ಯರು ಪಾಲ್ಗೊಂಡಿದ್ದರು.