ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ಅವರು ನೇಮಕಗೊಂಡಿದ್ದಾರೆ. ಇದುವರೆಗೆ ಅವರು ಪ್ರಭಾರ ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಅಕ್ಷರದಾಸೋಹ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿರೂಪಾಕ್ಷಪ್ಪ ಅವರು ವರ್ಗಾವಣೆಗೊಂಡ ಬಳಿಕ ಶ್ರೀಮತಿ ತಾರಾಕೇಸರಿ ಅವರು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ತಾರಾಕೇಸರಿ ಅವರ ಸೇವಾ ಹಿರಿತನವನ್ನು ಪರಿಗಣಿಸಿ ಅವರನ್ನು ಸರಕಾರ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನೇಮಕಗೊಳಿಸಿ ಆದೇಶಿಸಿದೆ ಎಂದು ವರದಿಯಾಗಿದೆ
next post